ಕನ್ನಡ ರಾಜ್ಯೋತ್ಸವಕ್ಕೆ ಶಾಲಾ-ಕಾಲೇಜುಗಳಿಗೆ ಮಹತ್ವದ ಸೂಚನೆ ಕೊಟ್ಟ DCM ಡಿಕೆಶಿ!

Share to all

ಬೆಂಗಳೂರು:- DCM ಡಿಕೆ ಶಿವಕುಮಾರ್ ಅವರು, ಕನ್ನಡ ರಾಜ್ಯೋತ್ಸವಕ್ಕೆ ಶಾಲಾ-ಕಾಲೇಜುಗಳಿಗೆ ಮಹತ್ವದ ಸೂಚನೆ ಕೊಟ್ಟಿದ್ದಾರೆ. ನವೆಂಬರ್‌ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದಿದ್ದಾರೆ.

ತನ್ನ ನಿವಾಸದಲ್ಲಿ ಆಯುಧ ಪೂಜೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನವೆಂಬರ್ 1 ನಮಗೆ ರೋಮಾಂಚನ ದಿನ. ಈ ವರ್ಷ 50ನೇ ವರ್ಷದ ರಾಜೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ‍್ಯ ದಿನದ ರೀತಿ ಸಂಭ್ರಮ ಮಾಡಬೇಕು ಎಂದು ಹೇಳಿದರು.

ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಾಗಿ ಕನ್ನಡ ಬಾವುಟ ಹಾರಿಸಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಚರಣೆ ಮಾಡಿ ನಿಮ್ಮ ಸಂಸ್ಥೆಯಲ್ಲಿ ಏನು ಮಾಡಿದ್ದೀರಿ ಎನ್ನುವುದಕ್ಕೆ ನಾವು ನೀಡುವ ನಂಬರ್‌ಗೆ ಪೋಸ್ಟ್ ಮಾಡಬೇಕು. ಕನ್ನಡ ಭೂಮಿಯಲ್ಲಿ ಕನ್ನಡ ಕಲಿಯಬೇಕಾಗಿರೋದು ಎಲ್ಲರಿಗೂ ಕಡ್ಡಾಯ ಎಂದರು.

ಕನ್ನಡ ಬಾವುಟ ಕಡ್ಡಾಯ ಮಾಡಿದ್ದನ್ನು ಕನ್ನಡ ಸಂಘಟನೆಗಳು ದುರುಪಯೋಗ ಮಾಡಿಕೊಳ್ಳಬಾರದು. ಕಾರ್ಖಾನೆ, ಕಂಪನಿಗಳಿಗೆ ಒತ್ತಡ, ಕಿರುಕುಳ ನೀಡಬಾರದು. ಕನ್ನಡ ಸಂಘಟನೆಗಳು ರಿಗೂ ಹೆದರಿಸಬಾರದು. ಹಾಗೆ ಏನಾದರೂ ಒತ್ತಡ ಹೇರಿದರೆ ಅಂತಹ ಸಂಘಟನೆಗಳ ವಿರುದ್ಧ ಕ್ರಮ ಗ್ಯಾರಂಟಿ ಎಂದಿದ್ದಾರೆ DCM ಡಿಕೆಶಿ.


Share to all

You May Also Like

More From Author