ಬೆಂಗಳೂರು :ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಿರುದ್ಧ ಬೆಂಗಳೂರಿನಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಜತೆಗೆ, ಸಂತ್ರಸ್ತೆ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿರುವ ಪ್ರಕರಣವನ್ನೂ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಶಾಸಕ ವಿನಯ್ ಕುಲಕರ್ಣಿ ವಿರುದ್ಧ ರೈತ ಮಹಿಳೆ ದೂರು ನೀಡಿದ್ದರು. ವಿನಯ್ ಕುಲಕರ್ಣಿ ವಿರುದ್ಧ ಜೀವ ಬೆದರಿಕೆ,
ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನಲ್ಲಿ ವಿನಯ್ ಕುಲಕರ್ಣಿ ಅತ್ಯಾಚಾರವೆಸಗಿದ್ದರೆಂದು ಹಾವೇರಿಯ ಮಹಿಳೆ ಸಂಜಯ್ ನಗರ ಠಾಣೆಗೆ ದೂರು ನೀಡಿದ್ದರು. ಸಂತ್ರಸ್ತ ಮಹಿಳೆ ದೂರಿಗೆ ಪ್ರತಿದೂರು ದಾಲಿಸಿದ್ದ ವಿನಯ್ ಕುಲಕರ್ಣಿ, 2 ಕೋಟಿ ರೂಪಾಯಿ ನೀಡುವಂತೆ ರೈತ ಮಹಿಳೆ ಬ್ಲ್ಯಾಕ್‌ಮೇಲ್ ಮಾಡಿದ್ದರು ಎಂದು ಆರೋಪಿಸಿದ್ದರು. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಸ್ಥಳ ಮಹಜರು ನಡೆಸಿದ್ದಾರೆ. ಸಂತ್ರಸ್ತೆಯಿಂದ ಪ್ರಾಥಮಿಕ ಹೇಳಿಕೆ ದಾಖಲಿಸಿಕೊಂಡಿದ್ದಾರೆ.