ಮೈಸೂರು – ದರ್ಭಾಂಗ ಎಕ್ಸ್‌ಪ್ರೆಸ್ ರೈಲು ಮತ್ತು ಗೂಡ್ಸ್ ರೈಲು ನಡುವೆ ಭೀಕರ ಅಪಘಾತವಾಗಿದೆ. ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು, ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.
ಹೌದು ಮೈಸೂರಿನಿಂದ ದರ್ಭಾಂಗ್‌ಗೆ ಭಾಗಮತಿ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಸುತ್ತಿತ್ತು. ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಭಾಗಮತಿ ಎಕ್ಸ್‌ಪ್ರೆಸ್ರೈಲಿನ ಆರು ಬೋಗಿಗಳು ಹಳಿತಪ್ಪಿದ್ದು, 2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕರ್ನಾಟಕದಿಂದ 45 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಕೆಲವರು ಸಂಕಷ್ಟಕ್ಕೆ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಟ್ರೇನ್ ನಲ್ಲಿದ್ದ ಬೆಂಗಳೂರಿಗರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದಂತೆ ತಿರುವಳ್ಳೂರು ಜಿಲ್ಲಾಧಿಕಾರಿ ಟಿ.ಪ್ರಭುಶಂಕರ್ ಮಾತನಾಡಿ, ರಕ್ಷಣಾ ಕಾರ್ಯಚಾರಣೆ ನಡೆಯುತ್ತಿದ್ದು, ಸಾವು-ನೋವಿನ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭಿಸಿಲ್ಲ ಎಂದು ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಟಾನ್ಲಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗಿದ್ದು, ಇತರರು ಪೊನ್ನೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೈಲು ಹಳಿ ತಪ್ಪಿರುವುದು ಈ ಅವಘಡಕ್ಕೆ ಕಾರಣವಾಗಿರಬಹುದು. ಲೂಪ್ ಲೈನ್ ಪ್ರವೇಶಿಸಿ ಬಳಿಕ ರೈಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಕನ್ನಡಿಗರಿಗಾಗಿ ಸಹಾಯವಾಣಿ: ಮೈಸೂರು ಕಂಟ್ರೋಲ್ ರೂಂನಲ್ಲಿ ಸಹಾಯವಾಣಿಯೊಂದಿಗೆ ವಾರ್ ರೂಮ್ ಅನ್ನು ಸ್ಥಾಪಿಸಲಾಗಿದೆ ಮತ್ತು 9731143981 ಈ ನಂಬರ್ ಗೆ ಸಂಪರ್ಕಿಸಬಹುದಾಗಿದೆ. 0821-2422400 ಸಂಖ್ಯೆಯ ಮೈಸೂರು ರೈಲು ನಿಲ್ದಾಣದಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಲಾಗಿದೆ. 139 ಸಹಾಯವಾಣಿ ಮೈಸೂರು ವಿಭಾಗೀಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಬೆಂಗಳೂರು ಕಂಟ್ರೋಲ್ ರೂಂನಲ್ಲಿ ಸಹಾಯವಾಣಿಯೊಂದಿಗೆ ವಾರ್ ರೂಮ್ ಸ್ಥಾಪಿಸಲಾಗಿದೆ ಮತ್ತು 08861309815 ನಲ್ಲಿ ಸಂಪರ್ಕಿಸಬಹುದು. ಎಸ್‌ಬಿಸಿ, ಎಂವೈಎ ಮತ್ತು ಕೆಜಿಐ ರೈಲು ನಿಲ್ದಾಣದಲ್ಲಿ ಸ್ಥಾಪಿಸಲಾದ ಸಹಾಯ ಕೇಂದ್ರವನ್ನು ತೆರೆಯಲಾಗಿದೆ.