ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಟಿಕೆಟ್ ಫೈನಲ್ ಆಗುತ್ತದೆ: ಹೆಚ್ ಡಿ ಕುಮಾರಸ್ವಾಮಿ

Share to all

ಬೆಂಗಳೂರು: ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಟಿಕೆಟ್ ಫೈನಲ್ ಆಗುತ್ತದೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪದೇ ಪದೇ ಚನ್ನಪಟ್ಟಣಕ್ಕೆ ಡಿಕೆ ಶಿವಕುಮಾರ್ ಪ್ರವಾಸ ಮಾಡುತ್ತಿದ್ದರೂ ಏನು ಆಗಲ್ಲ. ಡಿಕೆ ಶಿವಕುಮಾರ್ ಎಷ್ಟು ಬಾರಿ ಚನ್ನಪಟ್ಟಣಕ್ಕೆ ಭೇಟಿ ಮಾಡಿದರೂ ಅವರಿಗೇನು ಇಲ್ಲಿ ಫಲ ಸಿಗಲ್ಲ.

ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಟಿಕೆಟ್ ಫೈನಲ್ ಆಗುತ್ತದೆ. ಚುನಾವಣೆ ದಿನಾಂಕ 4-5 ದಿನಗಳಲ್ಲಿ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಕೂಡಲೇ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ಜೊತೆ ಚರ್ಚೆ ಮಾಡಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಹೇಳಿದರು.

ಇನ್ನೂ ಚನ್ನಪಟ್ಟಣದಲ್ಲಿ ಎರಡು ಬಾರಿ ಜೆಡಿಎಸ್ ಗೆದ್ದಿದೆ. ಈ ಹಿನ್ನಲೆಯಲ್ಲಿ ದೆಹಲಿ ಮತ್ತು ರಾಜ್ಯ ಬಿಜೆಪಿ ನಾಯಕರ ಜೊತೆ ಮಾತನಾಡಿ ಜೆಡಿಎಸ್‌ಗೆ ಟಿಕೆಟ್ ಬಿಟ್ಟು ಕೊಡಲು ಮನವಿ ಮಾಡಿದ್ದಾರೆ. ಬಿಜೆಪಿ ನಾಯಕರ ಸಹಮತದೊಂದಿಗೆ ಅವರ ಅಭಿಪ್ರಾಯ ಪಡೆದು ತೀರ್ಮಾನ ಮಾಡೋಣ ಎಂದು ಹೇಳಿದ್ದೇನೆ. ಎಲ್ಲರು ಒಟ್ಟಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದೇನೆ ಎಂದರು.


Share to all

You May Also Like

More From Author