ಸಾಂಸ್ಕೃತಿಕ ನಗರಿಯಲ್ಲಿ ಮೇಳೈಸಿದ ಜಂಬೂ ಸವಾರಿ. ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಗಾಂಭೀರ್ಯದಿಂದ ಕ್ಯಾಪ್ಟನ್ ಅಭಿಮನ್ಯು ಸಾಗಿದ. ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ.
ರಾಜವಂಶಸ್ಥ & ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಥ್ ನೀಡಿದ್ದಾರೆ. ಅಧಿದೇವತೆ ಚಾಮುಂಡಿಯನ್ನ ಅಭಿಮನ್ಯು ಹೊತ್ತಿದ್ದಾನೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ 31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ, ಆಚಾರ-ವಿಚಾರ, ಭೌಗೋಳಿಕ ಹಿನ್ನೆಲೆ ಹಾಗೂ ಇಲಾಖಾವಾರು, ನಿಗಮ ಮಂಡಳಿ , ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತ 51 ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಲಾಗಿದೆ.