ಸಿಎಂ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು.ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು.
ಹುಬ್ಬಳ್ಳಿ:-ಮುಖ್ಯಮಂತ್ರಿ ಸಿದ್ಧರಾಮಯ್ಯ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಧಾರವಾಡ ಕಡೆಗೆ ಹೊರಟಾಗ ಬಿಜೆಪಿ ಕಾರ್ಯಕರ್ತರಿಬ್ಬರು ಸಿಎಂ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದ ಬಳಿ ಸಿಎಂ ಕಾರು ಬರುತ್ತಿದ್ದಂತೆ ಜಗದೀಶ್ ಕಂಬಳಿ, ಮಂಜುನಾಥ ಕಲಾಲ್ ಎಂಬ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾದಾಗ ಸ್ಥಳದಲ್ಲಿದ್ದ ಹಳೇಹುಬ್ಬಳ್ಳಿ ಪೋಲೀಸ ಇನಸ್ಪೆಕ್ಟರ್ ಸುರೇಶ ಎಳ್ಳೂರ ತಕ್ಷಣ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.