ರೇಣುಕಾಸ್ವಾಮಿ ಪ್ರಕರಣ: ಇಂದು ಆರು ಮಂದಿಯ ಜಾಮೀನು ಭವಿಷ್ಯ! ದರ್ಶನ್ʼಗೆ ಬೇಲಾ, ಜೈಲಾ..?

Share to all

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಂಧನವಾಗಿ ನಾಲ್ಕು ತಿಂಗಳಾಗುತ್ತಾ ಬಂದಿದೆ. ಜೂನ್ 11 ರಂದು ದರ್ಶನ್, ಪವಿತ್ರಾ ಮತ್ತು ಇತರೆ ಆರೋಪಿಗಳನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್​ಗೆ ಜೈಲಿನಲ್ಲಿ ಆರೋಗ್ಯ ಸಮಸ್ಯೆ ಎದುರಾಗಿದೆ. ಇದರ ಬೆನ್ನಲ್ಲೇ ನಟ ದರ್ಶನ್‌ ಜಾಮೀನು ಅರ್ಜಿಯ ಆದೇಶ ಇಂದು ಪ್ರಕಟವಾಗಲಿದೆ. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ 57ನೇ ಸಿಸಿಹೆಚ್‌ ನ್ಯಾಯಾಲಯ ಆದೇಶ ಹೊರಡಿಸಲಿದೆ.

ಸರ್ಕಾರದ ಅಭಿಯೋಜಕ ಎಸ್​ಪಿಪಿ ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ಅವರ ಸುದೀರ್ಘ ವಾದ – ಪ್ರತಿವಾದ ಆಲಿಸಿದ 57ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ. ಜೈಶಂಕರ್ ಅವರು ಅ.14ಕ್ಕೆ ಜಾಮೀನು ತೀರ್ಪು ಕಾಯ್ದಿರಿಸಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾಗೌಡ, ರವಿ, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್ ಜಾಮೀನು ಆದೇಶ ಇದೇ ದಿನವೇ ಬರಲಿದೆ. ಜಾಮೀನು‌ ಸಿಗದಿದ್ದರೆ ದರ್ಶನ್​​ ಹೈಕೋರ್ಟ್​​ ಮೊರೆ ಹೋಗುವ ಸಾಧ್ಯತೆ ಇದೆ. ಇತ್ತ ಕೋರ್ಟ್ ತೀರ್ಪು, ಅತ್ತ ಜೈಲಲ್ಲಿ ಆರೋಪಿಗಳಿಗೆ ಟೆನ್ಷನ್‌ ಶುರುವಾಗಿದೆ.


Share to all

You May Also Like

More From Author