ಹಿಂದೂ ಧರ್ಮ ಸುಧಾರಿಸುವ ಲಕ್ಷಣ ಕಾಣ್ತಿಲ್ಲ, ಬೌದ್ಧ ಧರ್ಮ ಸ್ವೀಕರಿಸುತ್ತೇನೆ: ಸಚಿವ ಮಹದೇವಪ್ಪ ಬಹಿರಂಗ ಹೇಳಿಕೆ!

Share to all

ಬೆಂಗಳೂರು:- ಹಿಂದೂ ಧರ್ಮ ಸುಧಾರಿಸುವ ಲಕ್ಷಣ ಕಾಣ್ತಿಲ್ಲ. ಹೀಗಾಗಿ ಬೌದ್ಧ ಧರ್ಮ ಸ್ವೀಕರಿಸುತ್ತೇನೆ ಎಂದು ಸಚಿವ ಮಹದೇವಪ್ಪ ಬಹಿರಂಗ ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ. ಹಾಗಾಗಿ ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.


Share to all

You May Also Like

More From Author