MLA Munirathna: ಬಿಜೆಪಿ ಶಾಸಕನಿಗೆ ಬಿಗ್‌ ರಿಲೀಫ್:‌ ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆ ಭಾಗ್ಯ

Share to all

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಆರ್‌.ಆರ್‌.ನಗರದ ಶಾಸಕ ಮುನಿರತ್ನಗೆ ಒಂದು ತಿಂಗಳ ಬಳಿಕ ಜಾಮೀನು ದೊರೆತಿದೆ. ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ಇದೇ ನ್ಯಾಯಾಲಯ ಅತ್ಯಾಚಾರ ಪ್ರಕರಣದ ಇತರ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಲೋಹಿತ್, ಕಿರಣ್ ಮತ್ತು ಮಂಜುನಾಥ್‌ಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಜಾಮೀನು ಮಂಜೂರು ಮಾಡಿದ್ದರು.ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ರಾಜರಾಜೇಶ್ವರಿ ನಗರದ ಸಾಮಾಜಿಕ ಕಾರ್ಯಕರ್ತೆ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಮತ್ತೊಂದೆಡೆ DNA ಪರೀಕ್ಷೆಗೆ ರಕ್ತದ ಮಾದರಿ ಸಂಗ್ರಹಿಸಲು SIT ಅರ್ಜಿ ಸಲ್ಲಿಸಿದರೆ, ಮುನಿರತ್ನ ಪರ ವಕೀಲರು ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದಾರೆ. ಈ ಅರ್ಜಿ ವಿಚಾರಣೆಯೂ ಇಂದು 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದಿದೆ. ಜಾಮೀನು ನೀಡುವ ಮೂಲಕ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಕೊಟ್ಟಿದೆ.


Share to all

You May Also Like

More From Author