ಬೆಂಗಳೂರು: ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ ಹಾಗೂ ಚೆನ್ನಪಟ್ಟಣದ ಸ್ಥಾನ ತೆರವಾಗಿದೆ. ಆದ್ದರಿಂದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ನವೆಂಬರ್ 13ಕ್ಕೆ ಕರ್ನಾಟದ 3 ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯಲಿದೆ. ಅಕ್ಟೋಬರ್ 25ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ನವೆಂಬರ್ 13 ರಂದು ಮೂರು ಅಸೆಂಬ್ಲಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ಪರಿಶೀಲನೆ ಅಕ್ಟೋಬರ್ 28ಕ್ಕೆ ನಡೆಯಲಿದೆ.ನಾಮಪತ್ರ ಹಿಂತೆಗೆದುಕೊಳ್ಳಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.
ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ ಹಾಗೂ ಚೆನ್ನಪಟ್ಟಣದ ಸ್ಥಾನ ತೆರವಾಗಿದೆ. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಇ ತುಕರಾಂ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಇ ತುಕರಾಂ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದರು. ಹೀಗಾಗಿ ತುಕರಾಂ ತಮ್ಮ ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇನ್ನು ಚನ್ನಪಟ್ಟಣ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಗೆದ್ದು ಇದೀಗ ಕೇಂದ್ರ ಸಚಿವರಾಗಿದ್ದಾರೆ.
ಹೀಗಾಗಿ ಕುಮಾರಸ್ವಾಮಿ ಚೆನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇನ್ನು ಶಿಗ್ಗಾಂವಿ ಕ್ಷೇತ್ರದಿಂದ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಸಭಾ ಚುನಾವಣೆ ವೇಳೆ ಹಾವೇರಿ ಕ್ಷೇತ್ರದಿಂದ ಗೆದ್ದ ಸಂಸದರಾಗಿದ್ದಾರೆ. ಹೀಗಾಗಿ ಬೊಮ್ಮಾಯಿ ಶಿಗ್ಗಾಂವಿ ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಮೂರು ತೆರವಾಗಿರುವ ವಿಧಾನಸಭಾ ಕ್ಷೇತ್ರಗಳಿಗೆ ಇದೀಗ ಚುನಾವಣಾ ಆಯೋಗ ಉಪ ಚುನಾವಣೆ ಘೋಷಣೆಯಾಗಲಿದೆ.