ಆನ್ಲೈನ್ ನಗದು ಹಗರಣ: ಸೈಬರ್ ವಂಚಕರ ಬಲೆಗೆ ಬಿದ್ದು 91 ಲಕ್ಷ ಕಳೆದುಕೊಂಡ ಮಹಿಳೆ!

Share to all

ಚಿಕ್ಕಮಗಳೂರು:– ಆನ್ಲೈನ್ ವಂಚಕರ ಬಗ್ಗೆ ನಾವು ಎಷ್ಟು ನಿಗಾ ಇಟ್ಟರೂ ಸಾಲಲ್ಲ. ಮಾತಲ್ಲೇ ಪುಸಲಾಯಿಸಿ ಮರಳು ಮಾಡಿ ನಂಬಿಸಿ ಮೋಸ ಮಾಡ್ತಾರೆ. ಅದರಂತೆ ಚಿಕ್ಕಮಗಳೂರಿನಲ್ಲಿ ಸೈಬರ್ ವಂಚಕರ ಬಲೆಗೆ ಬಿದ್ದು 91 ಲಕ್ಷ ಕಳೆದುಕೊಂಡಿದ್ದಾರೆ.

ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ. ಫೇಸ್ಬುಕ್​ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್​ಗೆ ಹಣ ಹಾಕಿ ಕಂಗಾಲಾಗಿದ್ದಾರೆ. ಚಿಕ್ಕಮಗಳೂರು ನಗರದ ಮಹಿಳೆಯೊಬ್ಬರು ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ.

ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ 4315 ಹಣವನ್ನು ವಂಚಕರಿಗೆ ಹಾಕಿ ಮಹಿಳೆ ಕಂಗಾಲಾಗಿದ್ದಾರೆ.

ಡಬಲ್ ಹಣ ಮಾಡುವ ಆಸೆಗೆ ಬಿದ್ದು 91 ಲಕ್ಷ ಹಣ ಕಳೆದುಕೊಂಡ ಮಹಿಳೆ ಇದೀಗ ಹಣ ವಾಪಸ್ ಕೊಡಿಸುವಂತೆ ದೂರು ಸಲ್ಲಿಸಿದ್ದಾರೆ. ವಂಚನೆಯ ಕುರಿತು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿಕ್ಕಮಗಳೂರು ಪೊಲೀಸ್ ಇಲಾಖೆಯು ಆನ್ ಲೈನ್ ವಂಚಕರಿಂದ ದೂರ ಇರುವಂತೆ ಮನವಿ ಮಾಡಿದೆ.


Share to all

You May Also Like

More From Author