ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಚಾರ್ಜ್ಶೀಟ್ ಸಲ್ಲಿಕೆ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅವರು ಜಾಮೀನಿಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಲೇ ಬಂದಿದ್ದರು. ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಜಾಮೀನು ಕೊಡಲು ನಿರಾಕರಿಸಿದೆ. ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಮನೆಯಲ್ಲಿ ಇದೀಗ ಸಂತಸದ ವಾತಾವರಣ ಮನೆ ಮಾಡಿದೆ.
ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು.
ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ. ಹೀಗಾಗಿ ಇದ್ದ ಓರ್ವ ಮಗನನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ರೇಣುಕಾಸ್ವಾಮಿ ಪೋಷಕರಿಗೆ ಮೊಮ್ಮಗನ ಆಗಮನದಿಂದ ಸ್ವಲ್ಪ ಸಮಾಧಾನ ತಂದಿದೆ. ಈ ವಿಚಾರ ರೇಣುಕಾಸ್ವಾಮಿ ಕುಟುಂಬದ ಮೂಲಗಳಿಂದ ಮಾಹಿತಿ ತಿಳಿದಿದೆ.