ಬಿಗ್ಬಾಸ್ ಮನೆಯಿಂದ ಲಾಯರ್ ಜಗದೀಶ್ ಹಾಗೂ ರಂಜಿತ್ ಹೊರ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು ಸೋಶಿಯಲ್ ಮೀಡಿಯಾದಲ್ಲಿ ಹೀಗೊಂದು ಚರ್ಚೆ ನಡೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರು ದೊಡ್ಮನೆಯಲ್ಲಿ ಸಾಕಷ್ಟು ಕಿರಿಕ್ ಮಾಡಿಕೊಂಡಿದ್ದರು. ಅಕ್ಟೋಬರ್ 15ರ ಎಪಿಸೋಡ್ನಲ್ಲಿ ಅವರು ಬಿಗ್ ಬಾಸ್ ವಿರುದ್ಧವೇ ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ಅವರು ಬಿಗ್ ಬಾಸ್ನಿಂದಲೇ ಔಟ್ ಆಗಿದ್ದಾರೆ.
ಬಿಗ್ ಬಾಸ್ನಲ್ಲಿ ಜಗದೀಶ್ ಅವರ ಮಿತಿಮೀರಿದ ವರ್ತನೆ ಅನೇಕರಿಗೆ ಇಷ್ಟ ಆಗಿಲ್ಲ. ಈಗ ಅವರು ಹೊರ ಹೋಗುತ್ತಿದ್ದಂತೆ ಮನೆಯಲ್ಲಿ ಶಾಂತಿಯ ವಾತಾವರಣ ನಿರ್ಮಾಣ ಆಗಲಿದೆಯೇ ಎನ್ನುವ ಕುತೂಹಲ ಮೂಡಿದೆ. ಇದರ ಜೊತಗೆ ಅವರು ಹೋಗಿದ್ದು ಏಕೆ ಎನ್ನುವ ಪ್ರಶ್ನೆಯೂ ಕಾಡಿದೆ.
ಜಗದೀಶ್ ಕಳೆದ ಮೂರ್ನಾಲ್ಕು ದಿನಗಳಿಂದ ತುಂಬಾ ಅಗ್ರೆಸೀವ್ ಆಗಿ ಆಟ ಆಡುತ್ತಿದ್ದರು. ಇತರೆ ಸ್ಪರ್ಧೆಗಳನ್ನು ಕೆರಳಿಸುವ ರೀತಿಯಲ್ಲಿ ಮಾತುಗಳನ್ನು ಆಡ್ತಿದ್ದಾರೆ ಅಂತಾ ಸ್ಪರ್ಧಿಗಳು ನೇರವಾಗಿ ಆರೋಪ ಮಾಡ್ತಿದ್ದರು. ಹೊಡೆದಾಡಿಕೊಂಡ ಹಿನ್ನೆಲೆ ಇಬ್ಬರನ್ನು ಬಿಗ್ಬಾಸ್ ಮನೆಯಿಂದ ಹೊರ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ.