ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇನ್ನು ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.ಜಾಮೀನಿನ ಮೇಲೆ 13ನೇ ಆರೋಪಿ ದೀಪಕ್ ಜೈಲಿನಿಂದ ಹೊರಗೆ ಬಂದಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 13ನೇ ಆರೋಪಿ ದೀಪಕ್ಗೆ ಕಳೆದ ಸೋಮವಾರ ಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿತ್ತು. ಕೋರ್ಟ್ ನೀಡಿರುವ ಷರತ್ತುಗಳನ್ನು ಪೂರೈಸಿ ಜೈಲಿಗೆ ನಿನ್ನೆ ರಾತ್ರಿ ಬೇಲ್ ಕಾಪಿ ತಲುಪಿದೆ. ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ದೀಪಕ್ ನನ್ನು ಬಿಡುಗಡೆ ಮಾಡಿದ್ರು.
ಇನ್ನೂ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಚಾರ್ಜ್ಶೀಟ್ ಸಲ್ಲಿಕೆ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅವರು ಜಾಮೀನಿಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಲೇ ಬಂದಿದ್ದರು.
ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಜಾಮೀನು ಕೊಡಲು ನಿರಾಕರಿಸಿದೆ. 17 ಆರೋಪಿಗಳಲ್ಲಿ ಇಲ್ಲಿಯವರೆಗೆ 5 ಜನಕ್ಕೆ ಮಾತ್ರ ಕೋರ್ಟ್ ಜಾಮೀನು ನೀಡಿದೆ. ಒಟ್ಟಾರೆಯಾಗಿ ಕಾರ್ತಿಕ್, ನಿಖಿಲ್, ಕೇಶವ ಮೂರ್ತಿ ರವಿಶಂಕರ್ ಹಾಗೂ ದೀಪಕ್ ಕುಮಾರ್ಗೆ ಕೋರ್ಟ್ನಿಂದ ಜಾಮೀನು ಸಿಕ್ಕಿದೆ.