ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು, ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ನಟ ಸುದೀಪ್ ಅವರ ತಾಯಿ, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ.
ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.