Accident: ಬಸ್-ಟೆಂಪೋ ಮಧ್ಯೆ ಭೀಕರ ರಸ್ತೆ ಅಪಘಾತ: 8 ಮಕ್ಕಳು ಸೇರಿದಂತೆ 12 ಮಂದಿ ಸಾವು

Share to all

ರಾಜಸ್ಥಾನ: ಆಟೋ-ರಿಕ್ಷಾ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ 12 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್‌ಪುರದ ಬಾರಿಯಲ್ಲಿ ನಡೆದಿದೆ. ಮೃತರಲ್ಲಿ ಐವರು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮಾಹಿತಿ ಪ್ರಕಾರ ಆಟೋ ಸವಾರ ಬರಿ ನಗರದ ಗುಮತ್ ಮೊಹಲ್ಲಾ ನಿವಾಸಿ. ಬರೌಲಿ ಗ್ರಾಮದಲ್ಲಿ ಭಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಹಿಂತಿರುಗುತ್ತಿದ್ದರು. ಅಷ್ಟರಲ್ಲಿ ಈ ಅವಘಡ ಸಂಭವಿಸಿದೆ. ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಗುಮತ್ ಪ್ರದೇಶದಲ್ಲಿ ಶೋಕ ಮಡುಗಟ್ಟಿದೆ. ಮೃತರ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಈ ಹೃದಯವಿದ್ರಾವಕ ಘಟನೆ ಇಡೀ ಪ್ರದೇಶವನ್ನು ಬೆಚ್ಚಿ ಬೀಳಿಸಿದೆ.


Share to all

You May Also Like

More From Author