ಬಿಜೆಪಿ ವಿಧಾನಪರಿಷತ್ ಸ್ಥಾನಕ್ಕೆ ಸೈನಿಕನ ರಾಜೀನಾಮೆ..? ಹುಬ್ಬಳ್ಳಿಗೆ ಆಗಮಿಸುತ್ತಿರುವ ಸಿ ಪಿ ಯೋಗೀಶ್ವರ..
ಹುಬ್ಬಳ್ಳಿ:- ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ಮೂರೂ ಮೂವತ್ತಕ್ಕೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ.ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಜೋರಾಗಲಿದೆ. ಅದರೊಂದಿಗೆ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಮಾಡೋದು ಬಹುತೇಕ ಖಚಿತವಾದಂತಾಗಿದೆ.
ಚನ್ನಪಟ್ಟಣ ಕ್ಷೇತ್ರದಿಂದ ಮೈತ್ರಿ ಅಬ್ಯೆರ್ಥಿಯಾಗ ಬಯಸಿದ್ದ ಸಿ ಪಿ ಯೋಗೀಶ್ವರ ಅವರಿಗೆ ಟಿಕೆಟ್ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಗುಡ್‌ಬೈ ಹೇಳಲಿದ್ದಾರೆ.