ಫಿಟ್ ಆದ ಸ್ಪೋಟಕ ಬ್ಯಾಟರ್: ನಿಟ್ಟುಸಿರು ಬಿಟ್ಟ ಟೀಮ್ ಇಂಡಿಯಾ!

Share to all

ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಯುವ ದಾಂಡಿಗ ಶುಭ್​ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಗಿಲ್ ಈಗ ಸಂಪೂರ್ಣ ಫಿಟ್ ಆಗಿದ್ದು, ಪುಣೆಯಲ್ಲಿ ನಡೆಯಲಿರುವ 2ನೇ ಪಂದ್ಯಕ್ಕೆ ಲಭ್ಯರಿರಲಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಶುಭ್​ಮನ್ ಗಿಲ್ ಕತ್ತು ಮತ್ತು ಭುಜದ ನೋವಿಗೆ ಒಳಗಾಗಿದ್ದರು. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅಲ್ಲದೆ ಗಿಲ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸರ್ಫರಾಝ್ ಖಾನ್ ಕಾಣಿಸಿಕೊಂಡಿದ್ದರು.

ಇದೀಗ ಶುಭ್​ಮನ್ ಗಿಲ್ ಆಗಮನದೊಂದಿಗೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಿಂದ ಒಬ್ಬ ಆಟಗಾರ ಹೊರಬೀಳಲಿದ್ದಾರೆ. ಇಲ್ಲಿ ಮೊದಲ ಪಂದ್ಯದಲ್ಲಿ ಸರ್ಫರಾಝ್ ಖಾನ್ 150 ರನ್ ಬಾರಿಸಿರುವ ಕಾರಣ ಅವರನ್ನು ಕೈ ಬಿಡುವ ಸಾಧ್ಯತೆಯಿಲ್ಲ ಎನ್ನಬಹುದು. ಆದರೆ ಗಿಲ್​ಗೆ ಸ್ಥಾನ ಕಲ್ಪಿಸಲು ಓರ್ವ ಬ್ಯಾಟರ್​ನನ್ನು ಕೈ ಬಿಡಬೇಕಾದ ಅನಿವಾರ್ಯತೆಯಂತು ಇದೆ.


Share to all

You May Also Like

More From Author