ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದ್ದ ಜೊತೆ ಜೊತೆಯಲ್ಲಿ ಧಾರಾವಾಹಿಯಲ್ಲಿ ಮೀರಾ ಪಾತ್ರ ವೀಕ್ಷಕರಿಗೆ ಅಚ್ಚುಮೆಚ್ಚು. ಇದೇ ಸೀರಿಯಲ್‌ನಲ್ಲಿ ಮೇಘಾ ಶೆಟ್ಟಿ ಕೂಡ ಸಖತ್ ಫೇಮಸ್ ಆಗಿದ್ದರು. ಆದರೆ ಮೀರಾ ಪಾತ್ರಧಾರಿ ರಿಯಲ್ ಹೆಸರು ಮಾನಸ ಮನೋಹರ್. ಪ್ರಸ್ತುತ ‘ಲಕ್ಷ್ಮಿ ನಿವಾಸ’ ಸೀರಿಯಲ್‌ನಲ್ಲಿ ನಟಿಸುತ್ತಿರುವ ಮಾನಸ ಅವರು ಪ್ರೀತಮ್ ಚಂದ್ರ ಎಂಬುವವರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಭಾವಿ ಪತಿ ಜೊತೆಗಿನ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ಮಾನಸಗೆ ಇದು 2ನೇ ಮದುವೆನಾ? ಎಂಬ ಪ್ರಶ್ನೆಗಳು ಅಭಿಮಾನಿಗಳಿಂದ ಎದುರಾಗಿದೆ. ಕಾಮೆಂಟ್ ಬಾಕ್ಸ್‌ನಲ್ಲಿ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಅದಕ್ಕೆ ನಟಿ ಕೂಡ ಹೌದು, ಇದು ನನಗೆ 2ನೇ ಮದುವೆ ಎಂದು ಪಾಸಿಟಿವ್ ಆಗಿ ರಿಯಾಕ್ಟ್ ಮಾಡಿದ್ದಾರೆ.
ಎಲ್ಲರ ಸಂದೇಹಗಳಿಗೆ ಉತ್ತರ ಇದೆ. ಇದು ನನ್ನ ಎರಡನೇ ಮದುವೆ. ಕೆಲವು ಬಾರಿ ದೈಹಿಕವಾಗಿ ಮದುವೆಯಾಗುತ್ತೇವೆ ಆದರೆ ಯಾವುದೇ ಭಾವನಾತ್ಮಕ ಸಂಬಂಧವನ್ನು ಹೊಂದಿರುವುದಿಲ್ಲ. ನಾವು ಎಲ್ಲರ ಒಳಿತಿಗಾಗಿ ಮುಂದುವರಿಯಬೇಕು. ನಾವು ಮದುವೆಯಾಗುತ್ತಿದ್ದೇವೆ. ನನಗೆ ಯಾವುದೇ ಅಪರಾಧ ಎನಿಸುತ್ತಿಲ್ಲ. ಆದರೆ ಕೃತಜ್ಞತೆ ಮಾತ್ರ ಇದೆ. ಆದ್ದರಿಂದ ಅದನ್ನು ವ್ಯಕ್ತಪಡಿಸುತ್ತಿದ್ದೇನೆ ಎಂದು ನೆಟ್ಟಿಗರೊಬ್ಬರ ಕಾಮೆಂಟ್‌ಗೆ ನಟಿ ಸ್ಪಷ್ಟನೆ ಕೊಟ್ಟಿದ್ದಾರೆ.
ಇನ್ನೂ ಮಾನಸ ಭಾವಿ ಪತಿ ಪ್ರೀತಮ್ ಚಂದ್ರ ಅವರು ಫುಟ್ ಬಾಲ್ ಪ್ಲೇಯರ್ ಆಗಿದ್ದಾರೆ. ಅವರು ಫುಟ್ ಬಾಲ್ ಅಕಾಡೆಮಿ ಕೂಡ ನಡೆಸುತ್ತಿದ್ದಾರೆ. ಸದ್ಯದಲ್ಲೇ ಮಾನಸ ಮತ್ತು ಪ್ರೀತಮ್ ಮದುವೆ ಜರುಗಲಿದೆ. ಅಂದಹಾಗೆ, ಮಾನಸ ಅವರು ‘ಲಕ್ಷ್ಮಿ ನಿವಾಸ’ ಸೀರಿಯಲ್‌ನಲ್ಲಿ ಹೀರೋ ಸಿದ್ದೇಗೌಡರ ಅತ್ತಿಗೆ ಪಾತ್ರದಲ್ಲಿ ನಟಿಸುತ್ತಿದ್ದಾರೆ.