ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ ಸಿ.ಪಿ.ಯೋಗೇಶ್ವರ್!

Share to all

ರಾಮನಗರ: ಬಿಜೆಪಿ ರೆಬೆಲ್ ನಾಯಕ ಸಿ.ಪಿ ಯೋಗೇಶ್ವರ್ ಅವ್ರನ್ನ ಹಸ್ತದತ್ತ  ಸೆಳೆಯುವಲ್ಲಿ ಡಿಕೆ ಬ್ರದರ್ಸ್ ಸಕ್ಸಸ್ ಆಗಿದ್ದಾರೆ. ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಕರೆ ತರುವ ಮೂಲಕ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಂಡೆ ಸಹೋದರರು ಟಕ್ಕರ್ ನೀಡಿದ್ದಾರೆ. ಇದೀಗ ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಚನ್ನಪಟ್ಟಣದಲ್ಲೇ ತಂಗಿದ್ದ ಸಿಪಿವೈ ಮಂಗಳವಾರಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ಒಂದೂವರೆ ಕಿಲೋ ಮೀಟರ್ ರ್ಯಾಲಿ ನಡೆಸಿದರು. ಱಲಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡರು.

ಱಲಿಯುದ್ದಕ್ಕೂ ಘೋಷಣೆ ಮೊಳಗಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ರ್ಯಾಲಿಯಲ್ಲಿ ಪಾಲ್ಗೊಂಡರು. ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ಉಮೇದುವಾರಿಕೆ ಸಲ್ಲಿಸಿದರು. ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಶಾಸಕರು ಉಪಸ್ಥಿತರಿದ್ದರು.


Share to all

You May Also Like

More From Author