ರಾಮನಗರ: ಬೊಂಬೆಯಾಟವಾಗಿರುವ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಕಣದಲ್ಲಿದ್ದರೆ, ಅವರು ಎದುರಾಳಿಯಾಗಿ ಎನ್‌ಡಿಎ ಮೈತ್ರಿಕೂಟದಿಂದ ನಿಖಿಲ್ ಕುಮಾರಸ್ವಾಮಿ ಸೆಣೆಸಾಡಲಿದ್ದಾರೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಹೌದು ಇಂದು ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರ ಜೊತೆಗೆ ಬಳಿಕ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದು, ಬಳಿಕ ಚನ್ನಪಟ್ಟಣದ ಎನ್ ಡಿಎ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಪತ್ರ ಸಲ್ಲಿಕೆ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್, ಡಿ.ವಿ.ಸದಾನಂದ ಗೌಡ ಸೇರಿದಂತೆ ಹಲವು ಬಿಜೆಪಿ-ಜೆಡಿಎಸ್ ನಾಯಕರು ಭಾಗಿಯಾಗಿದ್ದರು.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರು ನಗರದ ಜೆಪಿ ನಗರದ ಶ್ರೀ ತಿರುಮಲಗಿರಿ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.