ಮಂಡ್ಯದವರು ಗಂಡಸರಲ್ಲ, ನರಸತ್ತವರು: ನಾಲಿಗೆ ಹರಿಬಿಟ್ಟ ಮಾಜಿ ಸಂಸದ ಶಿವರಾಮೇಗೌಡ!

Share to all

ಬೆಂಗಳೂರು:- ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕಿಸುವ ಭರದಲ್ಲಿ ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರನ್ನು ರಾಮನಗರದಿಂದ ಓಡಿಸಿದ್ದಾರೆ. ಆದರೆ ಮಂಡ್ಯದವರೆಲ್ಲ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಮಂಡ್ಯ ಜಿಲ್ಲೆಯ ಮುಖಂಡರು ಮತ್ತು ಜನತೆ ಈಗಲಾದರೂ ಎಚ್ಚೆತ್ತುಕೊಳ್ಳಿ. ಮಂಡ್ಯ ಜಿಲ್ಲೆಯ ಜನತೆಗೆ ಕರೆ‌ ಕೊಡುತ್ತೇನೆ “ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ” ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ಸಿ.ಪಿ.ಯೋಗೇಶ್ವರ್ ರೀತಿ ನಾನು ಕೂಡ ಜಂಪಿಂಗ್ ಸ್ಟಾರ್‌‌. ಶೀಘ್ರವೇ ಕಾಂಗ್ರೆಸ್ ಸೇರಲಿದ್ದೇನೆ ಎಂದರು. ನಾನು ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ, ಕಾಂಗ್ರೆಸ್ ಸೇರಲು ನಿರ್ಧಾರ ಮಾಡಿದ್ದೇನೆ. ಸಿ.ಪಿ.ಯೋಗೇಶ್ವರ್ ರೀತಿ ನಾನು ಕೂಡ ಜಂಪಿಂಗ್ ಸ್ಟಾರ್‌‌. ಸಂಸದ ಡಾ. ಮಂಜುನಾಥ್ ಅವರನ್ನು ಅಭ್ಯರ್ಥಿ ಮಾಡಲು ಸಿಪಿ ಯೋಗೇಶ್ವರ್​ ಶ್ರಮವಹಿಸಿದರು. ಆದರೆ ಚನ್ನಪಟ್ಟಣದಲ್ಲಿ ಯೋಗೇಶ್ವರ್‌ ಅವರನ್ನೇ ಬಲಿ ಪಡೆದಿದ್ದಾರೆ. ಚನ್ನಪಟ್ಟಣ ಜನ ದಡ್ಡರಲ್ಲ, ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದರು.


Share to all

You May Also Like

More From Author