BREAKING.. ಕಾಂಗ್ರೆಸ್ ಶಾಸಕನಿಗೆ ಕಠಿಣ ಶಿಕ್ಷೆ ಪ್ರಕಟ: ಸತೀಶ್ ಸೈಲ್‌ʼಗೆ 7 ವರ್ಷ ಜೈಲು!

Share to all

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಕ್ಕಿದೆ. 2010 ರಲ್ಲಿ ಲೋಕಾಯುಕ್ತ ಹಾಗೂ ಅರಣ್ಯಾಧಿಕಾರಿಗಳು ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಸಾರಿದ್ದರು. ಒಂದಲ್ಲ-ಎರಡಲ್ಲ ನೂರಾರು ಕೋಟಿ ರೂಪಾಯಿ ಬೆಲೆ ಬಾಳುವ ಅಕ್ರಮ ಅದಿರನ್ನು ಜಪ್ತಿ ಮಾಡಿದ್ದರು. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸತೀಶ್ ಸೈಲ್ ಸೇರಿದಂತೆ 7 ಆರೋಪಿಗಳನ್ನು ದೋಷಿ ಎಂದು ಹೇಳಿದ್ದು, ನ್ಯಾಯಾಲಯ ಶಾಸಕ ಸತೀಶ್​ ಸೈಲ್​​ ಸೇರಿದಂತೆ ಏಳು ಜನರ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.

ಕಾರವಾರದ ಶಾಸಕ ಸತೀಶ್ ಸೈಲ್ ಹಾಗೂ  ಅರಣ್ಯಾಧಿಕಾರಿ ಆಗಿದ್ದ ಮಹೇಶ್ ಬಿಳೆಯ ಅವರಿಗೆ ಮೊದಲ ಮತ್ತು 2ನೇ ಪ್ರಕರಣಗಳಲ್ಲಿ ತಲಾ 7 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಬೆಲೇಕೆರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧೀನದ ತನಿಖಾ ಸಂಸ್ಥೆ ಸಿಬಿಐನಿಂದ ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಾದ, ಪ್ರತಿವಾದ ಆಲಿಸಿ ಅ.24ರಂದು ಅಂತಿಮ ಆದೇಶವನ್ನು ಹೊರಡಿಸಿದ್ದರು. ಈ ವೇಳೆ ಒಟ್ಟು 6 ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ ಅಪರಾಧಿ ಎಂದು ಆದೇಶ ಹೊರಡಿಸಲಾಗಿತ್ತು. ಇದೀಗ ಶಿಕ್ಷೆ ವಿಧಿಸಲಾಗಿದೆ. ಮೊದಲ ಕೇಸಿನಲ್ಲಿ ಶಾಸಕ ಸತೀಶ್ ಸೈಲ್ ಹಾಗೂ  ಅರಣ್ಯಾಧಿಕಾರಿ ಆಗಿದ್ದ ಮಹೇಶ್ ಬಿಳೆಯ ಅವರಿಗೆ ತಲಾ 7 ವರ್ಷ ಶಿಕ್ಷೆ ಹಾಗೂ ಎಲ್ಲಾ ಆರೋಪಿಗಳಿಗೂ ಸೇರಿ 9.60 ಕೋಟಿ ರೂ. ದಂಡ ವಿಧಿಸಿದೆ.


Share to all

You May Also Like

More From Author