ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್ ಗೆ ಇತ್ತೀಚೆಗೆ ಬೆನ್ನು ನೋವು ಜೋರಾಗಿದೆ. ಹೀಗಾಗಿ ಭೇಟಿಗೆ ಮುಂದಾಗುತ್ತಿರುವ ನಟ ನಟಿಯರಿಗೆ ಭೇಟಿ ಅಸಾಧ್ಯ ಎನ್ನುತ್ತಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳಿ ದರ್ಶನ್ ಭೇಟಿಗೆ ಅವಕಾಶ ಕೇಳುತ್ತಿದ್ದಾರೆ ಎನ್ನಲಾಗಿದೆ.
ನಟ ನಟಿಯರ ಭೇಟಿ ಕುರಿತು ಪತಿ ದರ್ಶನ್ ಜೊತೆ ವಿಜಯಲಕ್ಷ್ಮೀ ಮಾತನಾಡಿದ್ದಾರೆ. ಆದರೆ ಸದ್ಯಕ್ಕೆ ಯಾರೂ ಬರುವುದು ಬೇಡ ಎಂದು ದರ್ಶನ್ ಹೇಳಿದ್ದಾರೆ. ಜಾಮೀನಿನ ವಿಚಾರದಲ್ಲಿ ಅವರು ಪಾಸಿಟಿವ್ ಆಗಿದ್ದಾರೆ.
ಕೊಲೆ ಆರೋಪಿ ದರ್ಶನ್ ಜಾಮೀನು ಅರ್ಜಿ ಕೆಳ ಹಂತದ ಕೋರ್ಟ್ನಲ್ಲಿ ರಿಜೆಕ್ಟ್ ಆಗಿದೆ. ಹೀಗಾಗಿ, ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಇಂದು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.
ಈ ಮೂಲಕ ನಟ ದರ್ಶನ್ ಗೆ ಇಂದು ಕೂಡ ರಿಲೀಫ್ ಸಿಗದಂತೆ ಆಗಿದೆ. ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಸ್ ವಿಶ್ವಚಿತ್ ಅವರನ್ನೊಳಗೊಂಡಂತ ನ್ಯಾಯಪೀಠವು ನಡೆಸಿತು.
ಪ್ರಕರಣ ಸಂಬಂಧ ವರದಿಯನ್ನು ನೀಡಲು ನಿರ್ದೇಶಿಸಿದ್ದರಿಂದಾಗಿ ಜೈಲು ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ನಟ ದರ್ಶನ್ ಪ್ರಕರಣದ ವರದಿಯನ್ನು ಸಲ್ಲಿಸಿತು. ಈ ಬಳಿಕ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.