ಹುಬ್ಬಳ್ಳಿ: ಲೋಕಾಯುಕ್ತ ಹಿಂದಿನಂತೆ ಖಡಕ್ ತನಿಖಾ ಸಂಸ್ಥೆಯಾಗಿ ಉಳಿದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಹಿಂದಿನಂತೆ ಖಡಕ್ ತನಿಖಾ ಸಂಸ್ಥೆಯಾಗಿ ಉಳಿದಿಲ್ಲ. ಬದಲಿಗೆ ಕಾಂಗ್ರೆಸ್ ಆಯೋಗವಾಗಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬಕ್ಕೆ ಅನುಕೂಲಕರ ರೀತಿಯಲ್ಲಿ ತನಿಖೆ ನಡೆಯುತ್ತಿದೆ.
30 ಲಕ್ಷ ರೂಪಾಯಿ ಎಣಿಸುವ ವಿಡಿಯೋ ಸಮೇತ ಸುದ್ದಿ ಮಾಧ್ಯಮವೊಂದರಲ್ಲಿ ಬಿತ್ತರವಾಗಿದೆ. ಇಷ್ಟೊಂದು ದೊಡ್ಡ ಪ್ರಕರಣ ನಡೆದರೂ ಇದುವರೆಗೆ ಯಾರೊಬ್ಬರನ್ನೂ ಬಂಧಿಸಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇನ್ನೂ ವಾಲ್ಮೀಕಿ, ಮುಡಾ ಹೀಗೆ ಸಾಕಷ್ಟು ಹಗರಣ ನಡೆದರೂ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಕೈ ಹಿಡಿದಿದೆ ಎಂದು ಟೀಕಿಸಿದರು.
ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ. ಮೂರೂ ಕ್ಷೇತ್ರಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಚಿವರುಗಳನ್ನು ಇರಿಸಿದೆ. ಹಣದ ಹೊಳೆ ಹರಿಸುತ್ತಿದೆ. ಆದಾಗ್ಯೂ ಎನ್ಡಿಎ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.