ಪಾಕ್ ಕೋಚ್ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್: ನಾಲ್ಕೇ ತಿಂಗಳಿಗೆ ಜವಬ್ದಾರಿ ಸಾಕಾಯ್ತಾ!?

Share to all

ನಾಲ್ಕು ತಿಂಗಳ ಹಿಂದೆಯಷ್ಟೇ ಕೋಚ್‌ ಆಗಿ ನೇಮಕವಾಗಿದ್ದ ಗ್ಯಾರಿ ಕರ್ಸ್ಟನ್‌ ಅವರು ಇದೀಗ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಗ್ಯಾರಿ ಕರ್ಸ್ಟನ್‌ ಅವರು ಕೋಚಿಂಗ್‌ ನಲ್ಲಿ ಉತ್ತಮ ಹೆಸರು ಸಂಪಾದಿಸಿದವರು. 2011ರಲ್ಲಿ ವಿಶ್ವಕಪ್‌ ಗೆದ್ದ ವೇಳೆ ಅವರು ಭಾರತ ತಂಡದ ಕೋಚ್‌ ಆಗಿದ್ದವರು. ಕಳೆದ ನಾಲ್ಕು ತಿಂಗಳ ಹಿಂದೆ ಅವರು ಪಾಕಿಸ್ತಾನದ ಏಕದಿನ ಮತ್ತು ಟಿ20 ಕ್ರಿಕೆಟ್‌ ತಂಡದ ಕೋಚ್‌ ಆಗಿ ನೇಮಕವಾಗಿದ್ದರು. ಆದರೆ ಇದೀಗ ರಾಜೀನಾಮೆ ಘೋಷಿಸಿದ್ದಾರೆ.

ಕರ್ಸ್ಟನ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಕೆಲವು ಆಟಗಾರರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದು, ಹೀಗಾಗಿ ಕೋಚ್ ಹುದ್ದೆಯನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೂ ಮುನ್ನವೇ ಕರ್ಸ್ಟನ್ ಕೋಚ್ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗಿತ್ತು. ಅಲ್ಲದೆ ನವೆಂಬರ್ 4 ರಂದು ಮೆಲ್ಬೋರ್ನ್‌ನಲ್ಲಿ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಹಾಗೂ ಟಿ20 ಸರಣಿಗಾಗಿ ಪಾಕಿಸ್ತಾನ್ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸುತ್ತಿಲ್ಲ. ಹೀಗಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಕೂಡ ಬದಲಿ ಕೋಚ್ ಆಯ್ಕೆ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದೆ ವರದಿಯಾಗಿತ್ತು.

ಇದೀಗ ಈ ವರದಿ ನಿಜವಾಗಿದ್ದು, ಕೇವಲ 6 ತಿಂಗಳಲ್ಲೇ ಪಾಕಿಸ್ತಾನ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಗ್ಯಾರಿ ಕರ್ಸ್ಟನ್ ಕೆಳಗಿಳಿದಿದ್ದಾರೆ. ಸೌತ್ ಆಫ್ರಿಕಾದ ಮಾಜಿ ಆಟಗಾರನ ಈ ನಿರ್ಧಾರಕ್ಕೆ ಮುಖ್ಯ ಕಾರಣ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ನಡುವೆ ಭಿನ್ನಾಭಿಪ್ರಾಯ

ಪಾಕ್ ತಂಡದ ಉನ್ನತ-ಕಾರ್ಯಕ್ಷಮತೆಯ ತರಬೇತುದಾರರನ್ನಾಗಿ ಡೇವಿಡ್ ರೀಡ್ ಅವರನ್ನು ನೇಮಿಸುವಂತೆ ಕರ್ಸ್ಟನ್ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದ್ದರು. ಆದರೆ ಈ ಕೋರಿಕೆಗೆ ಪಾಕ್ ಕ್ರಿಕೆಟ್ ಮಂಡಳಿ ಒಲವು ತೋರಿಲ್ಲ. ಇದರಿಂದ ಪಿಸಿಬಿ ಹಾಗೂ ಕೋಚ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ

ಅತ್ತ ಕೆಲ ಆಟಗಾರರ ಜೊತೆಗೂ ಗ್ಯಾರಿ ಕರ್ಸ್ಟನ್ ಉತ್ತಮ ಸಂಬಂಧ ಹೊಂದಿಲ್ಲ. ಈ ಬಗ್ಗೆ ಆಟಗಾರರು ಕೂಡ ಪಾಕ್ ಕ್ರಿಕೆಟ್ ಮಂಡಳಿಗೆ ದೂರು ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಂದ ಕರ್ಸ್ಟನ್ ತಮ್ಮ ಹುದ್ದೆಗೆ ರಾಜೀನಾಮೆ ನಿರ್ಧರಿಸಿದ್ದಾರೆ. ಅದರಂತೆ ಇದೀಗ ಕೋಚ್ ಹುದ್ದೆಗೆ ಗುಡ್ ಬೈ ಹೇಳಿದ್ದಾರೆ.


Share to all

You May Also Like

More From Author