ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್.!

Share to all

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ಅವರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿದೆ. ದರ್ಶನ್ ಆರೋಗ್ಯ ಸಮಸ್ಯೆಯನ್ನು ಮುಂದು ಮಾಡಿ ಜಾಮೀನು ಕೇಳಲಾಗಿದೆ. ಹೌದು ಆರೋಗ್ಯ ಸಮಸ್ಯೆಯನ್ನ ಮುಂದಿಟ್ಟುಕೊಂಡು ವಕೀಲರು ವಾದ ಮಂಡಿಸಿದ್ದಾರೆ. ಡಿ.ಕೆ ಶಿವಕುಮಾರ್ ಪ್ರಕರಣದಲ್ಲಿ ಜಾಮೀನು ಉಲ್ಲಂಘಿಸಿ ವಾದ ಮಂಡಿಸಿದರು. ಡಿಕೆ ಶಿವಕುಮಾರ್ ಅವರಿದ್ದ ಆರೋಗ್ಯ ಸಮಸ್ಯೆಗಿಂತ ಇದು ಬಹಳ ಗಂಭೀರವಾಗಿದೆ.

ಬೆನ್ನು ಹುರಿಯ ಸಮಸ್ಯೆಯಿಂದ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೆ ಆದರೆ ಮುಂದೊಂದು ದಿನ ಬಹಳ ದೊಡ್ಡ ಸಮಸ್ಯೆಗೆ ಕಾರಣ ಆಗುತ್ತದೆ. ಡಿಸ್ಕ್ ನಲ್ಲಿ ಆದ ಸಮಸ್ಯೆಯಿಂದ ರಕ್ತ ಪರಿಚಲನೆ ಆಗುತ್ತಿಲ್ಲ. ಇದು ನಾರ್ಮಲ್ ಟ್ರೀಟ್ ಮೆಂಟ್ ಆಗಲ್ಲ, ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಆದ್ದರಿಂದ ಇದನ್ನು ಪರಿಗಣಿಸಿ ದರ್ಶನ್ ಗೆ ಜಾಮೀನು ನೀಡಬೇಕು ಎಂದು ವಾದ ಮಂಡಿಸಿದರು.

ಆರೋಗ್ಯದ ದೃಷ್ಟಿಯಿಂದ ನಟ ದರ್ಶನ್ ಗೆ ಜಾಮೀನು ನೀಡಬೇಕೆಂದು ವಕೀಲ ಸಿವಿ ನಾಗೇಶ್ ಮನವಿ ಮಾಡಿದ್ದಾರೆ.ಇದಕ್ಕೆ ಪ್ರತಿಕ್ರಿಯೆ ನೀಡಿದ ಹೈಕೋರ್ಟ್ ಜಡ್ಜ್ ಮುಂದೆ ಸಮಸ್ಯೆ ಆದರೆ ಅದನ್ನು ಸರಿಪಡಿಸಲಾಗುವುದಿಲ್ಲ , ವಿಚಾರಣಾಧೀನ ಕೈದಿಗೂ ಉತ್ತಮ ಆರೋಗ್ಯದ ಹಕ್ಕಿದೆ . ಚಿಕಿತ್ಸೆ ಪಡೆಯುವುದು ವ್ಯಕ್ತಿಯ ಮೂಲಭೂತ ಹಕ್ಕು ಎಂದರು.

ನೀವು ಎಲ್ಲಿ ಚಿಕಿತ್ಸೆ ಪಡೆಯಲು ಬಯಸುತ್ತೀರಾ ಎಂದು ಜಡ್ಜ್ ಲಾಯರ್ ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಿವಿ ನಾಗೇಶ್ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತೇವೆ ಎಂದು ಹೇಳಿದರು.    ಆದರೆ ಎಸ್ಪಿಪಿ ಅವರು ದರ್ಶನ್ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದ್ದಾರೆ. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 30 ಕ್ಕೆ ಕಾಯ್ದಿರಿಸಲಾಗಿದೆ.

 


Share to all

You May Also Like

More From Author