ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಪಕ್ಷ ನೀಡಿದ್ದ ಫ್ರೀ ಬಸ್ ಯೋಜನೆಯನ್ನು ಅಧಿಕಾರಕ್ಕೆ ಬಂದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಜಾರಿ ಮಾಡಿದ್ದರು. ಶಕ್ತಿ ಯೋಜನೆ ರಾಜ್ಯದ ಹಲವು ಮಹಿಳೆಯರಿಗೆ ಖುಷಿ ಬಂದಿದೆ, ಇದೇ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆಯ ಪರಿಷ್ಕರಣೆ ಬಗ್ಗೆ ಮಾತನಾಡಿದ್ದರು. ಜತೆಗೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರ ಆಗುತ್ತದೆ ಎಂಬ ಚರ್ಚೆ ಜೋರಿತ್ತು. ಇದರಿಂದ ಫಲಾನುಭವಿಗಳಲ್ಲಿ ಆತಂಕ ಎದುರಾಗಿತ್ತು. ಸದ್ಯ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಜಾರಿಯಲ್ಲಿರುವ ಮಹಿಳೆಯರ ಶಕ್ತಿ ಯೋಜನೆ ಪರಿಷ್ಕರಣೆ ಉದ್ದೇಶ ಇಲ್ಲ. ಸದ್ಯದಲ್ಲಿ ಅಂತಹ ಯಾವುದೇ ಸರ್ಕಾರದ ಹಂತದಲ್ಲಿ ಇಲ್ಲ. ಕೆಲ ಮಹಿಳೆಯರು ಹಾಗೇ (ಯೋಜನೆ ಸವಲತ್ತುಗಳು ಬೇಡ) ಹೇಳಿದ್ದಾರೆ ಅಂತ ಹೇಳಿಕೆ ನೀಡಿದ್ದಾರೆ. ನಾನು ಇರಲಿಲ್ಲ ಆವಾಗ. ಆದ್ದರಿಂದ ರಾಜ್ಯದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.
ಪ್ರಸ್ತುತ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಜೆಟ್ನಲ್ಲಿ ಘೋಷಿಸಿರುವ ರೂ.52,009 ಕೋಟಿ ಪೈಕಿ ಈಗಾಗಲೇ ರೂ.24,235 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗಾಗಿ ಯೋಜನೆಗಳ ಲಾಭ ತಲುಪುವಂತಾಗಲು ಇ ಆಡಳಿತ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಶಕ್ತಿ ಯೋಜನೆ’ ನಿಲ್ಲಲ್ಲ, ಶಕ್ತಿ ಯೋಜನೆ ಪರಿಷ್ಕರಿಸುವುದು ಸರ್ಕಾರದ ಹಂತದಲ್ಲಿ ಇಲ್ಲ. ಶಕ್ತಿ ಯೋಜನೆ ಪರಿಷ್ಕರಿಸುವ ಉದ್ದೇಶ ಹಾಗೂ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದರು.