Virat Kohli: ಹೊಸ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ: ವಿರಾಟ್ ಇದ್ದಲ್ಲಿ ರೆಕಾರ್ಡ್ ಗೆ ಬರವೇ!

Share to all

ವಿರಾಟ್ ಕೊಹ್ಲಿ ಇದೀಗ ಏನು ಮಾಡಿದರೂ ದಾಖಲೆಯೇ ಇದೀಗ ರಾಯಲ್ ಚಾಲೆಂಜರ್ಸ್ ರಿಟೆನ್ಶನ್ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಅಲ್ಲೂ ಕಿಂಗ್ ಕೊಹ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಭಾರತೀಯ ಕ್ರಿಕೆಟಿಗನೊಬ್ಬ ಅತಿ ಹೆಚ್ಚು ಮೊತ್ತಕ್ಕೆ ರಿಟೈನ್ ಆಗಿದ್ದು ಇದೇ ಮೊದಲು.

IPL 2025 ರಲ್ಲಿ ರಾಯಲ್ ಚಾಲೆಂಜರ್ಸ್ ತಂಡದ ಆಟಗಾರ ವಿರಾಟ್ ಕೊಹ್ಲಿ ಅವರು ಬರೋಬ್ಬರಿ 21 ಕೋಟಿ ಸಂಭಾವನೆ ಪಡೆಯುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಾರೆ.

ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿಯೇ ಇತ್ತು. 2021 ರಲ್ಲಿ ಕೊಹ್ಲಿಯನ್ನು ಆರ್​ಸಿಬಿ 17 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದ್ದರು. ಆದರೆ ಈ ಬಾರಿ 21 ಕೋಟಿ ರೂ. ಪಡೆಯುವ ಮೂಲಕ ಐಪಿಎಲ್​ನಲ್ಲಿ ಇಪ್ಪತ್ತು ಕೋಟಿಗೂ ಅಧಿಕ ಮೊತ್ತ ಪಡೆದ ಏಕೈಕ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

ಹಾಗೆಯೇ ಈ 21 ಕೋಟಿ ರೂ.ನೊಂದಿಗೆ ವಿರಾಟ್ ಕೊಹ್ಲಿಯ ಒಟ್ಟು ಐಪಿಎಲ್ ಗಳಿಕೆಯು 200 ಕೋಟಿ ರೂ. ದಾಟಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಸಂಭಾವನೆ ಪಡೆದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಈಗಲೂ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ. ಡೆಕ್ಕನ್ ಚಾರ್ಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿರುವ ರೋಹಿತ್ ಶರ್ಮಾ 18 ಸೀಸನ್​ಗಳಿಂದ ಒಟ್ಟು 210.9 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ.

ಇದೀಗ ವಿರಾಟ್ ಕೊಹ್ಲಿ 209.2 ಕೋಟಿ ರೂ.ನೊಂದಿಗೆ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ವಿಶೇಷ ಎಂದರೆ ಐಪಿಎಲ್ ಇತಿಹಾಸದಲ್ಲಿ ಒಂದೇ ಫ್ರಾಂಚೈಸಿ ಪರ ಕಣಕ್ಕಿಳಿದು 209 ಕೋಟಿ ರೂ.ಗೂ ಅಧಿಕ ಮೊತ್ತ ಪಡೆದ ಏಕೈಕ ಆಟಗಾರ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿ ಅವರದ್ದು. ಅಂದರೆ 2008 ರಿಂದ 2024 ರವರೆಗೆ ವಿರಾಟ್ ಕೊಹ್ಲಿ ಆರ್​ಸಿಬಿ ಫ್ರಾಂಚೈಸಿ ಪರ ಕಣಕ್ಕಿಳಿದಿದ್ದಾರೆ.


Share to all

You May Also Like

More From Author