ದೆಹಲಿ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದ ಸುಪ್ರೀಂ: ವಿಷಯ ಏನು!?

Share to all

ದೆಹಲಿ:- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಎಷ್ಟರ ಮಟ್ಟಿಗಿದೆ ಅನ್ನೋದು ಗೊತ್ತೇ ಇದೆ. ಆದರೂ ಅಲ್ಲಿನ ಸರ್ಕಾರ ದೀಪಾವಳಿ ಹಬ್ಬ ಇದ್ದರೂ ಪಟಾಕಿ ನಿಷೇಧ ಜಾರಿ ಮಾಡಿರಲಿಲ್ಲ. ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿರುವ ದೆಹಲಿ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ. ಪಟಾಕಿ ನಿಷೇಧಕ್ಕೆ ದೆಹಲಿ ಸರ್ಕಾರ ಮತ್ತು ಪೊಲೀಸರು ಪ್ರತಿಕ್ರಿಯೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಒತ್ತಾಯಿಸಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಓಕಾ ನೇತೃತ್ವದ ಉನ್ನತ ನ್ಯಾಯಾಲಯದ ಪೀಠವು ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಸರಿಯಾಗಿ ಜಾರಿಗೊಳಿಸಲಾಗಿಲ್ಲ. ಪಟಾಕಿಗಳನ್ನು ನಿಷೇಧಿಸುವ ಆದೇಶವೇನಾಗಿದೆ? ಮತ್ತು ಅದನ್ನು ಹೇಗೆ ಕಾರ್ಯಗತಗೊಳಿಸಲಾಗುತ್ತಿದೆ? ಎಂದು ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ಸೂಚಿಸಿದೆ.

ದೀಪಾವಳಿಯ ನಂತರ ಮಾಲಿನ್ಯ ಹೆಚ್ಚಳದ ಬಗ್ಗೆ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧವನ್ನು ಜಾರಿಗೊಳಿಸಲಾಗಿಲ್ಲ ಎಂದು ಬೇಸರ ಹೊರಹಾಕಿದೆ.


Share to all

You May Also Like

More From Author