ಬೆಂಗಳೂರು:– ಮದ್ಯ ಮಾರಾಟಗಾರರು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿದ್ದಾರೆ. ನವೆಂಬರ್.20ರಂದು ರಾಜ್ಯಾದ್ಯಂತ ಮದ್ಯ ಮಾರಾಟವನ್ನು ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ.
ವಿಪರೀತ ಲಂಚ, ಅಕ್ರಮ ಲೈಸೆನ್ಸ್ ನೀಡುವಿಕೆ ಸೇರಿದಂತೆ ಅಬಕಾರಿ ಇಲಾಖೆಯ ಭಾರಿ ಭ್ರಷ್ಟಾಚಾರವನ್ನು ವಿರೋಧಿಸಿ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕ ನೇತೃತ್ವದಲ್ಲಿ ಮದ್ಯ ಸನ್ನದುದಾರರು ರಾಜ್ಯಾದ್ಯಂತ ನವೆಂಬರ್ 20ರಂದು ಮದ್ಯದಂಗಡಿ ಬಂದ್ ಮಾಡಲು ನಿರ್ಧರಿಸಿದೆ.
ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಆರೋಪಿಸಿದ್ದು, ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ಲಂಚ, ಅಕ್ರಮ ಲೈಸೆನ್ಸ್ ನವೀಕರಣ ಸೇರಿದಂತೆ ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಇದನ್ನು ವಿರೋಧಿಸಿ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕ, ನವೆಂಬರ್ 20ರಂದು ರಾಜ್ಯಾದ್ಯಂತ ಮದ್ಯದಂಗಡಿ ಬಂದ್ ಮಾಡಲು ತೀರ್ಮಾನಿಸಿದೆ.