ಪವಿತ್ರಾ ಗೌಡಗೆ ಶಾಕ್: ಇಂದೂ ಕೂಡ ಸಿಗಲಿಲ್ಲ ಜಾಮೀನು – ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Share to all

ಬೆಂಗಳೂರು: ಬೇಲ್​ ನಿರೀಕ್ಷೆಯಲ್ಲಿದ್ದ ನಟಿ ಪವಿತ್ರಾ ಗೌಡಗೆ ಮತ್ತೆ ನಿರಾಸೆ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ.

ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಆಗಿದ್ದು, ನ.21 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪವಿತ್ರಾ ಗೌಡ , ಅನುಕುಮಾರ್. ನಾಗರಾಜ್, ಲಕ್ಷ್ಮಣ್, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆದಿದೆ.

ಈ ಪೈಕಿ ಎ-1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಆಗಿದ್ದು, ನ.21 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಆಗಿದ್ದು, ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ದರ್ಶನ್​ ಸಹಚರರು ಅಪಹರಿಸಿ ಬೆಂಗಳೂರಿಗೆ ಕರೆತಂದಿದ್ದರು. ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಲಾಯಿತು. ಆತನ ಪ್ರಾಣ ಹೋದ ಬಳಿಕ ರಾಜಕಾಲುವೆಗೆ ಶವ ಎಸೆಯಲಾಯಿತು. ಈ ಕೇಸ್​ನಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದಾರೆ.


Share to all

You May Also Like

More From Author