ಮುಂದಿನ ಮೂರುವರೆ ವರ್ಷ ನಾನೇ ಮುಖ್ಯಮಂತ್ರಿ ಎಂದ ಸಿದ್ದು: ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದ ಬೆಂಬಲಿಗರು

Share to all

ಬೆಂಗಳೂರು: ಉಪ ಕದನದ ಅಖಾಡ ರಂಗೇರಿದೆ. ಅಭ್ಯರ್ಥಿಗಳು ಕಣಕ್ಕಿಳಿದಾಗಿದೆ.. ಗೆಲುವಿನ ಲೆಕ್ಕಾಚಾರವೂ ಜೋರಾಗಿದೆ. ಮೂರು ದಿಕ್ಕು, ಮೂರು ಕ್ಷೇತ್ರದ ಉಪ ಕದನ.. ಕಾಂಗ್ರೆಸ್​​ಗೆ ಅಗ್ನಿಪರೀಕ್ಷೆ, ಬಿಜೆಪಿಗೆ ಪ್ರತಿಷ್ಠೆ, ದಳಕ್ಕೆ ಅಸ್ತಿತ್ವದ ಹೋರಾಟ. ಈ ಮಧ್ಯೆ ಮೂರು ಕ್ಷೇತ್ರಗಳ ಅಖಾಡಕ್ಕೆ ಅಭ್ಯರ್ಥಿಗಳ ರಂಗಪ್ರವೇಶ ಆಗಿದ್ದು,

ಚುನಾವಣೆಯನ್ನ ರಂಗೇರಿಸಿದೆ. ಇನ್ನೂ ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಮುಗಿದ ಅಧ್ಯಾಯ. ಮುಂದಿನ ಮೂರುವರೆ ವರ್ಷ ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ. ಜೊತೆಗೆ, ಮುಂದಿನ ಮೂರುವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿ ಇರಲಿದ್ದೇನೆ ಎನ್ನುವುದನ್ನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ ” ಎಂದು ಸಿದ್ದರಾಮಯ್ಯಾ ಘಂಟಾಗೋಷವಾಗಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 136 ಶಾಸಕರ ಬಲದೊಂದಿಗೆ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ವಿಚಾರ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ನಂತರ ಸಿದ್ದರಾಮಯ್ಯ ಸಿಎಂ ಆದರೂ ಎರಡೂವರೆ ವರ್ಷದ ನಂತರ ಅಧಿಕಾರ ಬಿಟ್ಟುಕೊಡಲಿದ್ದಾರೆ ಎಂಬ ವದಂತಿ ಇತ್ತು. ಆದರೆ, ಆ ಬಗ್ಗೆ ಕಾಂಗ್ರೆಸ್ ಪಕ್ಷ ಅಧಿಕೃತ ಮಾಹಿತಿಯನ್ನಂತೂ ನೀಡಿಲ್ಲ. ಆದರೆ, ನಂತರದ ಅನೇಕ ದಿನಗಳಲ್ಲಿ ಸಿಎಂ ಹುದ್ದೆ ವಿಚಾರವಾಗಿ ಬಹಳಷ್ಟು ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿದ್ದವು.

ಇದೀಗ ಚನ್ನಪಟ್ಟಣ ಕ್ಷೇತ್ರದ ಚೆಕ್ಕೆರೆಯಲ್ಲಿ ಡಿಕೆ ಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದಾಗ ಅವರ ಬೆಂಬಲಿಗರು “ಮುಂದಿನ ಸಿಎಂ ಡಿಕೆ ಶಿವಕುಮಾರ್”​ ಅಂತ ಘೋಷಣೆ ಕೂಗಿದರು. ಈ ವೇಳೆ ಡಿಕೆ ಶಿವಕುಮಾರ್​ ಮಾತು ನಿಲ್ಲಿಸಿ ಬೆಂಬಲಿಗರಿಂದ ದೂರ ನಡೆದರು. ಆದರೂ ಕೂಡ ಸುಮ್ಮನಾಗದ ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜೈ ಅಂತ ಘೋಷಣೆ ಕೂಗಿದರು.

ಡಿಸಿಎಂ ಡಿಕೆ ಶಿವಕುಮಾರ್ ಮುಂದೊಂದು ದಿನ ಸಿಎಂ ಆಗಲಿ, ಸ್ಥಾನ ಬಿಟ್ಟುಕೊಡಿ ಎಂದು ಸ್ವಾಮೀಜಿಯೊಬ್ಬರು ಬಹಿರಂಗ ವೇದಿಕೆಯಲ್ಲಿ ಹೇಳಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ದಲಿತ ಸಿಎಂ ಕೂಗು ಸಹ ಕೇಳಿಬಂದಿತ್ತು. ನಂತರ ಹೈಕಮಾಂಡ್ ಮಧ್ಯಪ್ರವೇಶಿಸಿ ರಾಜ್ಯ ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಕಡಿವಾಣ ಹಾಕಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಮುಂದಿನ ಮೂರುವರೆ ವರ್ಷ ಸಿದ್ದರಾಮಯ್ಯ, ಕಾಂಗ್ರೆಸ್ಸೇ ಅಧಿಕಾರದಲ್ಲಿರಲಿದೆ ಎಂಬ ಹೇಳಿಕೆ ನೀಡಿ ಮತ್ತೆ ಚರ್ಚೆ ಹುಟ್ಟುಹಾಕಿದ್ದಾರೆ.


Share to all

You May Also Like

More From Author