ಗುಲ್ಬರ್ಗಾ: ವಿಜಯಪುರದಲ್ಲಿ ವಕ್ಫ್ ಆಸ್ತಿ ವಿವಾದ ಬೆನ್ನಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ರೈತರ ಜಮೀನನ್ನು ವಕ್ಫ್ ಖಾತೆಗೆ ಸೇರಿಸಲು ತೋರಿದ ಕೈಚಳಕ ಬಯಲಾಗಿತ್ತು. ಇದರಿಂದ ಆಕ್ರೋಶಗೊಂಡ ರೈತರು ಹೋರಾಟಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಪಹಣಿಗಳಲ್ಲಿದ್ದ ವಕ್ಫ್ ಹೆಸರನ್ನು ಡಿಲೀಟ್ ಮಾಡಲಾಗಿದೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ವಕ್ಫ್ ಹಠಾವೋ ದೇಶ ಬಚಾವೋ ಎಂದು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆಯಲ್ಲಿ ಪೊಲೀಸರ ಮುಂದೆಯೇ, ‘ಜೀವ ಕೊಡುವುದಕ್ಕೂ, ಜೀವ ತೆಗೆಯುವುದಕ್ಕೂ ಸಿದ್ಧರಿದ್ದೀವಿ ಹುಷಾರ್.. ಯುವಕರ ಮನೆಯಲ್ಲಿ ತಲ್ವಾರ್ ಇವೆ. ಎಲ್ಲರ ಮನೆಯಲ್ಲಿ ಎಲ್ಲ ಇದೆ. ಯಾರ್ ಬರುತ್ತಾರೆ ಅವರನ್ನು ತಲ್ವಾರ್‌ನಿಂದ ಕಡಿಯುತ್ತೇವೆ. ಇನ್ಮುಂದೆ ನಾವು ಮಕ್ಕಳ ಕೈಯಲ್ಲಿ ಪೆನ್ನು ಕೊಡುವುದರ ಬದಲು ತಲ್ವಾರ್ ಕೊಡೋಣ’ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದರು.
ಸ್ವಾಮೀಜಿಯ ಹೇಳಿಕೆಯ ಆಧಾರದ ಮೇಲೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಕಾಯಿದೆ 299, 353/2 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶವಿಟ್ಟುಕೊಂಡಿದ್ದಾರೆ ಎಂದು ಎಫ್‌ಐಆರ್ ದಾಖಲಾಗಿದೆ.