ಧಾರವಾಡ: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.
ಅದರಂತೆ ಧಾರವಾಡದ ಗಾಂಧಿನಗರ ಬಡಾವಣೆಯಲ್ಲಿರುವ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮನೆ ಎದುರಿನಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಲ್ಲೂ ಪರಿಶೀಲನೆ ನಡೆಸಿದ್ದಾರೆ.
ಗೋವಿಂದಪ್ಪ ಭಜಂತ್ರಿಗೆ ಸೇರಿದ ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್ಹೌಸ್ ಧಾರವಾಡದ ತೇಜಸ್ವಿನಗರ ಬಡಾವಣೆಯ ಅಳಿಯನ ಮನೆ, ಲಕ್ಕಮನಹಳ್ಳಿ ಬಡಾವಣೆ ಕೆಐಎಡಿಬಿ ಕಚೇರಿ ಮೇಲೂ ದಾಳಿ ಮಾಡಿದ್ದಾರೆ. ಹಾಗೇ ನರಗುಂದದಲ್ಲಿರುವ ಸಹೋದರನ ಮನೆ ಮೇಲೂ ಡಿವೈಎಸ್ಪಿ ವೆಂಕನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ.