ದಶಕಗಳ ಬಳಿಕ ಚಿಕ್ಕಮಗಳೂರಿನಲ್ಲಿ ನಕ್ಸಲ್ ಚಟುವಟಿಕೆ, 3 ಬಂದೂಕುಗಳು ಪತ್ತೆ!

Share to all

ಚಿಕ್ಕಮಗಳೂರು:- ದಶಕಗಳ ಬಳಿಕ ಚಿಕ್ಕಮಗಳೂರಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಶುರುವಾಗಿದ್ದು, 3 ಬಂದೂಕುಗಳು ಪತ್ತೆಯಾಗಿದೆ ಆ್ಯಂಟಿ ನಕ್ಸಲ್​ ಫೋರ್ಸ್​ ಮತ್ತು ಪೊಲೀಸರು ತಪಾಸಣೆಗೆ ಇಳಿದು ಪರಿಶೀಲಿಸಿದ್ದಾರೆ. ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬುವರ ಮನೆಯೊಂದರಲ್ಲಿ 3 ಬಂದೂಕು ಪತ್ತೆಯಾಗಿವೆ. ಈ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿದೆ.

ಬಂದೂಕು ಸಿಕ್ಕಿರುವ ಸಂಬಂಧ ಜಯಪುರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಸಿಐಟಿ ಎಡಿಜಿಪಿ ಪ್ರಣಬ್ ಮೊಹಂತಿ ಭೇಟಿ, ಪರಿಶೀಲನೆ ನಡೆಸಿದರು

ಒತ್ತುವರಿ, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೆ ಇಬ್ಬರನ್ನು ವಶಕ್ಕೆ ಪಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ


Share to all

You May Also Like

More From Author