ಬೆಂಗಳೂರು: ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೇ. 4% ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ ಚರ್ಚೆ ಮತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುವುದನ್ನು ಮನಗಂಡ ಕಾಂಗ್ರೆಸ್ ಸರ್ಕಾರ ಕೂಡಲೇ ಎಚ್ಚೆತ್ತು ಸ್ಪಷ್ಟನೆ ನೀಡಿದೆ.
ಇದರ ಬೆನ್ನಲ್ಲೇ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತ ಸುದ್ದಿಗೆ ಸರ್ಕಾರದಿಂದ ಸ್ಪಷ್ಟನೆ ನೀಡಿದೆ. ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯಯವರಿಗೆ ಮುಸ್ಲಿಂ ಸಮುದಾಯ ಸಚಿವರು, ಶಾಸಕರ ನಿಯೋಗದಿಂದ ಸಿಎಂಗೆ ಮನವಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.
ಸಚಿವರಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್ ಅರ್ಷದ, ಆಸೀಪ್ ಸೇಠ, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕೀಶ್ ಬಾನು ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಆದ್ರೆ ಸರ್ಕಾರದ ಮುಂದೆ ಯಾವುದೇ ಮೀಸಲಾತಿ ನೀಡುವ ಪ್ರಸ್ತಾವನೆ ಇಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.