“ಕರಿಯ ಕುಮಾರಸ್ವಾಮಿ” ಎಂದ ಜಮೀರ್: ವಿವಾದ ಭುಗಿಲೇಳುತ್ತಿದ್ದಂತೆ ಕ್ಷಮೆ ಕೋರಿದ ಸಚಿವ!

Share to all

ಬೆಂಗಳೂರು:- ಚನ್ನಪಟ್ಟಣ ಉಪಚುನಾವಣೆಯ ಮತ ಪ್ರಚಾರದ ಸಂದರ್ಭದಲ್ಲಿ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಮಾತಿನ ಭರದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕುಮಾರಸ್ವಾಮಿಯವರ ಬಣ್ಣದ ಬಗ್ಗೆ ಮಾತನಾಡಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.ಇದೀಗ ಸಚಿವ ಜಮೀರ್ ಅವರು ಜೆಡಿಎಸ್ ಕಾರ್ಯಕರ್ತರಲ್ಲಿ ಕ್ಷಮೆ ಕೋರಿದ್ದಾರೆ.ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದಿದ್ದ ಜಮೀರ್ ಇದೀಗ ವಿವಾದ ಹೆಚ್ಚಾಗುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರಿಗೆ ಕ್ಷಮೆ ಕೋರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ತಮ್ಮ ಹೇಳಿಕೆ ಬಹಳಷ್ಟು ವಿವಾದ ಸೃಷ್ಟಿಯಾಗ್ತಿದ್ದಂತೆ ಕ್ಷಮೆ ಕೋರಿದರು.ನಾನು ಮತ್ತು ಕುಮಾರಸ್ವಾಮಿ ಅವರು ಆತ್ಮೀಯರಾಗಿದ್ದವರು. 24 ಗಂಟೆಯಲ್ಲಿ 14 ಗಂಟೆ ಜೊತೆಯಲ್ಲಿ ಇರ್ತಾ ಇದ್ದೊ. ಅವರು ನನ್ನ ಕುಳ್ಳ ಅಂತಾ ಇದ್ರು, ನಾನು ಕರಿಯಣ್ಣ ಅಂತಿದ್ದೆ. ಈಗ ಚುನಾವಣೆ ಹಿನ್ನೆಲೆ ಅದನ್ನು ದೊಡ್ಡ ವಿಚಾರ ಮಾಡ್ತಾ ಇದ್ದಾರೆ. ನಾನು ಮೊದಲ ಬಾರಿಗೆ ಕರಿಯಣ್ಣ ಅಂತಿಲ್ಲ. ನಾನು ಅಂತಹದ್ದು ಏನು ಹೇಳಿಲ್ಲ. ಪ್ರೀತಿಯಿಂದ ಅವರು ಕುಳ್ಳ ಅಂತಾ ಇದ್ರು, ನಾನು ಕರಿಯಣ್ಣ ಅಂತಾ ಇದ್ದೆ. ನನ್ನ ಮಾತಿಂದ ಯಾರಿಗಾದ್ರು ನಾವಾಗಿದ್ರೆ ನಾನು ಕ್ಷಮೆ ಕೇಳ್ತೀನಿ. ನನ್ನ ಹೇಳಿಕೆಯಿಂದ ಉಪಚುನಾವಣೆ ಮೇಲೆ ಪರಿಮಾಣ ಬೀರಲ್ಲ ಎಂದು ತಿಳಿಸಿದರು.

19 ರಂದು ವಕ್ಫ್ ಚುನಾವಣೆ ಇದೆ. ಈ ಹಿನ್ನೆಲೆ ಇಂದು ಸಭೆ ಕರೆದಿದ್ದೇವೆ. ಮತದಾರರು ಮಾತ್ರ ಭಾಗಿಯಾಗಿದ್ದಾರೆ. ವಕ್ಫ್ ಜಮೀನಿನ ವಿವಾದ ಇಲ್ಲಿ ಚರ್ಚೆ ಇಲ್ಲ. ವಕ್ಫ್ ಚುನಾವಣೆ ಪ್ರಚಾರ ಮಾತ್ರ ಮಾಡ್ತೀವಿ ಎಂದು ಸ್ಪಷ್ಟಪಡಿಸಿದರು.


Share to all

You May Also Like

More From Author