ಬೆಂಗಳೂರು: ನಟ ದರ್ಶನ್ಗೆ ದೊರೆತಿರುವ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಮೇಲ್ಮನವಿ ಯಾವಾಗ ಸಲ್ಲಿಸಬೇಕು ಎಂಬುದನ್ನು ಗೃಹ ಇಲಾಖೆ ಕಾರ್ಯದರ್ಶಿ ತೀರ್ಮಾನಿಸುತ್ತಾರೆ. ಮೇಲ್ಮನವಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ನಾನೂ ಸೂಚಿಸಿದ್ದೇನೆ. ಇಂಥ ಪ್ರಕರಣಗಳಲ್ಲಿ ಪ್ರಕ್ರಿಯೆಗಳನ್ನು ಅನುಸರಿಸಿ ಮುಂದುವರಿಯಬೇಕಾಗುತ್ತದೆ ಎಂದರು.
ಮೇಲ್ಮನವಿ ಸಲ್ಲಿಕೆ ವಿಚಾರವಾಗಿ ಕಾನೂನು ಇಲಾಖೆಯಿಂದಲೂ ಮಾಹಿತಿ ತೆಗೆದುಕೊಳ್ಳಬೇಕು. ಪೊಲೀಸ್ ಇಲಾಖೆಯಿಂದಲೂ ಕೂಡ ಪ್ರಸ್ತಾವನೆ ಬರಬೇಕು. ನಂತರವೇ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪರಮೇಶ್ವರ್ ಹೇಳಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ದೊರೆತಿದ್ದು ಅವರು ಜೈಲಿನಿಂದ ಬಿಡುಗಡೆಯಾಗಿ ಕೆಲವು ದಿನಗಳಾಗಿವೆ. ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.