ಧಾರವಾಡ: ಕೊಪ್ಪಳ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅಪರಾಧಿಗಳಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಎ1 ಮಂಜುನಾಥ ಜಾಮೀನಿಗೆ ಅರ್ಜಿ ಹಾಕದ ಹಿನ್ನೆಲೆಯಲ್ಲಿ ಆತನಿಗೆ ಬೇಲ್ ಸಿಕ್ಕಿಲ್ಲ. ಪ್ರತಿಯೊಬ್ಬರಿಂದ 50 ಸಾವಿರ ರೂ. ಬೆಲೆಯ ಬಾಂಡ್ ಹಾಗೂ ಒಬ್ಬ ಶ್ಯೂರಿಟಿ ಪಡೆದು ನ್ಯಾಯಾಲಯ ಜಾಮೀನು ನೀಡಿದೆ.ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ.
ಇದೇ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿದ್ದ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. 2014 ರ ಆಗಸ್ಟ್ 28 ರಂದು ದಲಿತರು ಹಾಗೂ ಸವರ್ಣಿಯರ ನಡುವೆ ಗಲಾಟೆ ನಡೆದಿತ್ತು. ಇದೆ ಅಕ್ಟೋಬರ್ 28 ರಂದು ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಜೀವಾವದಿ ಶಿಕ್ಷೆ ಘೋಷಣೆ ಮಾಡಿತ್ತು. ತೀರ್ಪು ಪ್ರಶ್ನಿಸಿ ಅಪರಾಧಿಗಳು ಧಾರವಾಡ ಹೈಕೋರ್ಟ ಮೊರೆ ಹೋಗಿದ್ದರು. ಇಂದು ಹೈಕೋರ್ಟ್ ದ್ವೀಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ, ಜಾಮೀನು ನೀಡಿದೆ.