ವಾಲ್ಮೀಕಿ ನಿಗಮ ಹಗರಣ: ಸಿಬಿಐ ನೋ ಎಂಟ್ರಿ – ಹೈಕೋರ್ಟ್ʼನಿಂದ ಆದೇಶ!

Share to all

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೆಪ್ಟೆಂಬರ್ 30ರಂದು ಮುಕ್ತಾಯಗೊಳಿಸಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

ಬೆಂಗಳೂರು ಪೂರ್ವ ವಲಯದ ಸಿಬಿಐ ಡಿಜಿಎಂ ಜೆ. ಮಹೇಶ್ ಎಂಬುವವರು ಈ ಹಿಂದೆಯೇ  ಸರ್ಕಾರಿ ಅಧಿಕಾರಿಗಳು,‌ ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ದೂರಿನಲ್ಲಿ ಉಲ್ಲೇಖ ಮಾಡಿದ್ದರು. ಯೂನಿಯನ್ ಬ್ಯಾಂಕ್‌ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲು ಮಾಡಿತ್ತು.

ಈ ನಡುವೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿ ಆದೇಶಿಸಿತ್ತು. ಎಸ್‌ಐಟಿ ಈಗಾಗಲೇ ಪ್ರಕರಣದ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ವಾಲ್ಮಿಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಬಗ್ಗೆ ಈಗಾಗಲೇ ಜಾರಿ ನಿರ್ದೇಶನಾಲಯ ಸಹ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.


Share to all

You May Also Like

More From Author