ಬೆಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ತೂಗುದೀಪ ಅವರಿಗೆ ಗೃಹ ಇಲಾಖೆಯು ಶಾಕ್ ಕೊಟ್ಟಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಜಾಮೀನು ನೀಡಿದೆ. ಬೆನ್ನು ನೋವಿನ ಚಿಕಿತ್ಸೆಗಾಗಿ ಆರು ವಾರಗಳ ಅವಕಾಶ ನೀಡಲಾಗಿದೆ. ಆದರೆ, ಚಿಕಿತ್ಸೆ ಇನ್ನೂ ಆಗಿಲ್ಲ. ಈಗ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ.
ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ2 ಆರೋಪಿ ಆಗಿದ್ದಾರೆ. ಅವರು ಬೆನ್ನು ನೋವಿನ ಕಾರಣ ಹೇಳಿ ಜಾಮೀನು ಪಡೆದಿದ್ದಾರೆ. ಇದನ್ನು ಸರ್ಕಾರಿ ಪರ ವಕೀಲರು ವಿರೋಧಿಸಿದ್ದರು. ಈಗ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆಗೆ ಪೊಲೀಸರು ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್ಗೆ ಸಲ್ಲಿಸಲಿರುವ ಕಡತವನ್ನು ಪೊಲೀಸರು ಗೃಹ ಇಲಾಖೆಗೆ ಕೊಟ್ಟಿದ್ದಾರೆ.
ಆದೇಶ ಪ್ರತಿಯನ್ನು ಗೃಹ ಇಲಾಖೆ ಪರಿಶೀಲಿಸಿದೆ. ಇದಕ್ಕೆ ಅನುಮತಿ ಕೂಡ ನೀಡಿದೆ. ಈಗ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಪೊಲೀಸರು ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಲಿದ್ದಾರೆ. ಇದರಿಂದ ದರ್ಶನ್ಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ.
ದರ್ಶನ್ ಅವರು ಈವರೆಗೆ ಯಾವುದೇ ಆಪರೇಷನ್ ಮಾಡಿಸಿಕೊಂಡಿಲ್ಲ. ಈ ಬಗ್ಗೆ ಹಲವು ಅನುಮಾಗಳು ಕೂಡ ಎದ್ದಿವೆ. ಜಾಮೀನಿನ ಅವಧಿ ಮುಗಿಯುವ ಸಂದರ್ಭದಲ್ಲಿ ದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾದರೆ ಅವರು ವಿಶ್ರಾಂತಿ ಪಡೆಯಲು ಮತ್ತಷ್ಟು ಸಮಯಾವಕಾಶ ಕೇಳುವ ಸಾಧ್ಯತೆ ಇರುತ್ತದೆ. ಆಗ ದರ್ಶನ್ ಅವರು ಮತ್ತಷ್ಟು ದಿನ ಹೊರಗೆ ಇರಬೇಕಾಗುತ್ತದೆ.