ಮೈಸೂರು: ಕರಿಯಾ, ಕುಳ್ಳ ಎಂದು ಮಾತಾಡಿಸಿ ಕೊಳ್ಳುವ ಸಂಸ್ಕೃತಿಯಿಂದ ಬಂದವ ನಾನಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಿಯಾ, ಕುಳ್ಳ ಎಂದು ಮಾತಾಡಿಸಿ ಕೊಳ್ಳುವ ಸಂಸ್ಕೃತಿಯಿಂದ ಬಂದವ ನಾನಲ್ಲ. ಅವರ ಮಾತುಗಳು ಅವರ ಸಂಸ್ಕೃತಿ ತೋರಿಸುತ್ತದೆ.
ಸಿಎಂ ಹಾಗೂ ಡಿಸಿಎಂ ಈ ಮಾತುಗಳನ್ನ ಸಮರ್ಥಿಸಿಕೊಂಡಿದ್ದಾರೆ. ಇದು ನಾಗರಿಕ ಸರ್ಕಾರನಾ? ಇಂಥ ಮಾತು ಹೇಳಿದವರು ಮೇಲೆ ಎಷ್ಟು ಕೇಸ್ ಹಾಕಿ ಜೈಲಿಗೆ ಹಾಕಿಲ್ಲ ಈ ಸರ್ಕಾರ? ಈಗ ಯಾಕೆ ಸುಮ್ಮನೆ ಇದೆ? ಸಿಎಂಗೆ ದೇವೇಗೌಡರು ಗರ್ವಭಂಗ ಮಾಡ್ತೀನಿ, ಸೊಕ್ಕು ಮುರಿತೀನಿ ಅನ್ನೋದು ಮಾನನಷ್ಟ ಹೇಳಿಕೆನಾ? ನಾನು ಯಾವತ್ತೂ ಅವರನ್ನು ಕುಳ್ಳ ಎಂದು ಕರೆದಿಲ್ಲ. ನಮ್ಮ ಸ್ನೇಹ ಇದ್ದದ್ದು ರಾಜಕೀಯವಾಗಿ ಅಷ್ಟೆ. ದುಡ್ಡಿನ ಮದದಿಂದ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.