BBK 11: ಬಿಗ್ ಮನೆಯಲ್ಲಿ ಪ್ರಜ್ಞೆತಪ್ಪಿ ಬಿದ್ದ ಚೈತ್ರಾ! ಪರಿಸ್ಥಿತಿ ಗಂಭೀರ, ಅಯ್ಯೋ ಅಂತದ್ದೇನಾಯ್ತು!?

Share to all

ಬಿಗ್ ಬಾಸ್ ಮನೆಯಲ್ಲಿ ದಿನಕ್ಕೆ ಒಂದಿಲ್ಲೊಂದು ಟಾಸ್ಕ್ ಕೊಡುತ್ತಾರೆ. ಪ್ರತಿ ಸ್ಪರ್ಧಿಗಳು ನಾವು ಗೆಲ್ಲಲೇ ಬೇಕು ಎಂದು ತುಂಬಾ ಎನರ್ಜಿಯಿಂದ ಆಟ ಆಡ್ತಾರೆ. ಆದ್ರೆ ಯಾಕೋ ಚೈತ್ರಾ ಕುಂದಾಪುರ್ ಅವರು ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದಾರೆ.

ಚೈತ್ರಾ ಕುಂದಾಪುರ ಅವರು ನೆಲದ ಮೇಲೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಬಿಗ್ ಬಾಸ್ ಮನೆಯ ಇನ್ನುಳಿದ ಸದಸ್ಯರು ಕೂಡ ಓಡೋಡಿ ಬಂದರು. ಎಷ್ಟು ಪ್ರಯತ್ನಿಸಿದರೂ ಕೂಡ ಚೈತ್ರಾ ಅವರಿಗೆ ಪ್ರಜ್ಞೆ ಬಂದಿಲ್ಲ

ಪ್ರಜ್ಞೆ ತಪ್ಪಿ ಬಿದ್ದಿದ್ದ ಚೈತ್ರಾ ಕುಂದಾಪುರ ಅವರ ಮುಖದ ಮೇಲೆ ನೀರು ಚಿಮುಕಿಸಲಾಯಿತು. ಆದರೂ ಸಹ ಅವರ ಎಚ್ಚರಗೊಳ್ಳಲಿಲ್ಲ. ಕೂಡಲೇ ಅವರನ್ನು ಕನ್ಫೆಷನ್​ ರೂಮಿಗೆ ಕರೆದುಕೊಂಡು ಬರುವಂತೆ ಬಿಗ್ ಬಾಸ್ ಆದೇಶಿಸಿದರು. ತ್ರಿವಿಕ್ರಮ್ ಅವರು ಚೈತ್ರಾ ಅವರನ್ನು ಎತ್ತಿಕೊಂಡು ಬಂದು ಕನ್ಫೆಷನ್​ ರೂಮ್​ನಲ್ಲಿ ಮಲಗಿಸಿದರು. ಎತ್ತಿಕೊಂಡ ಬರುವಾಗ ಚೈತ್ರಾ ಪರಿಸ್ಥಿತಿ ಗಂಭೀರವಾಗಿದ್ದಂತೆ ಕಾಣಿಸಿದೆ.

ಬಿಗ್ ಬಾಸ್ ಮನೆಯಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ಟಾಸ್ಕ್ ಇರುತ್ತದೆ. ಹಾಗಾಗಿ ಎನರ್ಜಿ ಲೆವೆಲ್ ಕಾಪಾಡಿಕೊಳ್ಳುವುದು ಮುಖ್ಯ. ಚೈತ್ರಾ ಅವರು ಹೀಗೆ ಏಕಾಏಕಿ ಪ್ರಜ್ಞೆ ತಪ್ಪಿ ಬೀಳಲು ಕಾರಣ ಆಗಿದ್ದು ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಕಳಪೆ ಮತ್ತು ಉತ್ತಮ ಯಾರು ಎಂಬುದನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಚೈತ್ರಾ ಅವರು ಕಾಣಿಸಿಕೊಳ್ಳಲಿಲ್ಲ. ಅವರನ್ನು ಈ ಪ್ರತಿಕ್ರಿಯೆಯಿಂದಲೇ ಹೊರಗೆ ಇಡಲಾಗಿದೆ.


Share to all

You May Also Like

More From Author