ಸಿಎಂ ಬಳಿಕ ಸಚಿವ ಜಮೀರ್ ಅಹಮ್ಮದ್ʼಗೆ ಬಿಗ್ ಶಾಕ್ ಲೋಕಾಯುಕ್ತ ಪೊಲೀಸರು!

Share to all

ಬೆಂಗಳೂರು: ವಕ್ಫ್​ ಆಸ್ತಿ ವಿವಾದ ಸಂಬಂಧ ಸಚಿವ ಜಮೀರ್ ಅಹಮ್ಮದ್ ಖಾನ್​ ಆಕ್ರೋಶಗಳು ಭುಗಿಲೆದ್ದಿವೆ. ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷದ ನಾಯಕರ ಕೆಂಗಣ್ಣಿಗೆ ಜಮೀರ್ ಅಹಮ್ಮದ್ ಗುರಿಯಾಗಿದ್ದಾರೆ. ಇದರಿಂದ ಜಮೀರ್ ಅಹಮ್ಮದ್ ಖಾನ್ ಮುಜುಗರಕ್ಕೀಡಾಗಿದ್ದಾರೆ. ಇದರ ಮಧ್ಯ ಜಮೀರ್​​ ಅಹಮ್ಮದ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ವಿಚಾರಣೆಗೆ ಡಿಸೆಂಬರ್ 3 ರಂದು ಖುದ್ದು ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೊಟೀಸ್ ನೀಡಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆ ಬಳಿ ಇರುವ ತಮ್ಮ ಮನೆಗೆ ಬಂದು ಲೋಕಾಯುಕ್ತ ಇನ್‌ಪೆಕ್ಟ‌ರ್ ಸಚಿವರಿಗೆ ನೊಟೀಸ್ ನೀಡಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ. ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ನಿರ್ದೇಶನಾಲಯದ ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು.

ತರುವಾಯ ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರೆದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು. ಪ್ರಾಥಮಿಕ ಹಂತದ ತನಿಖೆ ಮುಗಿಸಿದ ಪೊಲೀಸರು, ಈಗ ಅಕ್ರಮ ಆಸ್ತಿ ಸಂಪಾದನೆ ಸಂಬಂಧ ವಿಚಾರಣೆಗೆ ಹಾಜರಾಗಲು ಸಚಿವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.


Share to all

You May Also Like

More From Author