ಉತ್ತರ ಪ್ರದೇಶ:- ಇಲ್ಲಿನ ಝಾನ್ಸಿಯ ಮಹಾರಾಣಿ ಲಕ್ಷ್ಮಿಭಾಯಿ ಮೆಡಿಕಲ್ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸಾಕಷ್ಟು ಹಸುಗೂಸುಗಳು ಸುಟ್ಟು ಕರಕಲಾಗಿದೆ.
ಬೆಂಕಿ ಅನಾಹುತದ ಬಳಿಕ ಆಸ್ಪತ್ರೆಯಲ್ಲಿದ್ದ ಮಕ್ಕಳನ್ನ ಬದುಕಿಸಲು ಹರಸಾಹಸ ಪಟ್ಟಿದ್ದಾರೆ. ಆಸ್ಪತ್ರೆಯ ಕಿರಿದಾದ ಜಾಗದಲ್ಲಿ 54 ಮಕ್ಕಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಹೀಗಾಗಿ ಬೆಂಕಿಯ ಕೆನ್ನಾಲಿಗೆಯಲ್ಲಿ ಪುಟ್ಟ, ಪುಟ್ಟ ಮಕ್ಕಳನ್ನು ಬದುಕಿಸಲು ಸಾಧ್ಯವಾಗಿಲ್ಲ.
ಝಾನ್ಸಿ ಆಸ್ಪತ್ರೆಯಲ್ಲಿ ಒಂದೊಂದು ದೃಶ್ಯವೂ ಕರುಣಾಜನಕವಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನವಂತೂ ಮುಗಿಲು ಮುಟ್ಟಿದೆ. ಬೆಂಕಿ ಅವಘಡದಲ್ಲಿ ಕುಲದೀಪ್ ಎಂಬ ವ್ಯಕ್ತಿ ಮೂವರು ಮಕ್ಕಳನ್ನ ರಕ್ಷಣೆ ಮಾಡಿದ್ದಾನೆ. ಆದರೆ ಕತ್ತಲೆಯ ಕಾರಣದಿಂದ ತನ್ನ ಸ್ವಂತ ಮಗು ರಕ್ಷಣೆಗೆ ವಿಫಲವಾಗಿ ಕಣ್ಣೀರಿಡುತ್ತಿದ್ದಾರೆ.
ಝಾನ್ಸಿಯ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಆಕಸ್ಮಿಕ ಸಂಭವಿಸಿ ದೊಡ್ಡ ದುರಂತ ನಡೆದಿದೆ. ಆಸ್ಪತ್ರೆಯಲ್ಲಿ ಬೆಂಕಿ ನಂದಿಸುವ ಉಪಕರಣಗಳು ಸುಸ್ಥಿತಿಯಲ್ಲಿ ಇರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.