HD ಕುಮಾರಸ್ವಾಮಿ ಯೂಟರ್ನ್ ಹೊಡೆಯೋದ್ರಲ್ಲಿ ಎಕ್ಸ್‌ಪರ್ಟ್‌: ಸಚಿವ ಜಮೀರ್!

Share to all

ಮಂಗಳೂರು:ಕುಮಾರಸ್ವಾಮಿ ಯೂಟರ್ನ್ ಹೊಡೆಯೋದ್ರಲ್ಲಿ ಎಕ್ಸ್ಪರ್ಟ್ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವಲ್ಲಿ ನಿಸ್ಸೀಮರು ಹಾಗಾಗೇ ಅವರನ್ನು ಯು-ಟರ್ನ್ ಕುಮಾರಸ್ವಾಮಿ ಅಂತ ಜನ ಕರೆಯೋದು, ಎಂದು ವಕ್ಫ್ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಮಂಗಳೂರಲ್ಲಿ ಹೇಳಿದರು. ಜಮೀರ್ ಯಾವತ್ತೂ ತನ್ನನ್ನು ಕರಿಯ ಎಂದು ಕರೆದಿಲ್ಲ ಮತ್ತು ಅವರು ಯಾವತ್ತೂ ಜಮೀರ್ ಅವರನ್ನು ಕುಳ್ಳ ಅಂತ ಕರೆದಿಲ್ಲ ಎಂದು ಕುಮಾರಸ್ವಾಮಿ ಹೇಳಿರುವುದನ್ನು ಸಚಿವರ ಗಮನಕ್ಕೆ ತಂದಾಗ ಅವರು ಹೀಗೆ ಪ್ರತಿಕ್ರಿಯಿಸಿದರು.

ಲೋಕಾಯುಕ್ತ ನೋಟಿಸ್ ವಿಚಾರವಾಗಿ ಮಾತನಾಡಿ, ನೋಟಿಸ್ ಬಂದದ್ದು ನನಗೆ ಗೊತ್ತಿಲ್ಲ. ನೋಟಿಸ್ ಕೊಡೋದು ರೂಟೀನ್ ಇಡಿಯವರು ಎಸಿಬಿಗೆ ವರ್ಗಾವಣೆ ಮಾಡಿದ್ದಾರೆ. ಕೇಸ್ ಅಲ್ಲಿಂದ ಲೋಕಾಯುಕ್ತ‌ಗೆ ಕೇಸ್ ಬಂದಿದೆ.ನೋಟಿಸ್ ಬಂದ ಮೇಲೆ ಹೋಗಲೇ ಬೇಕು.

ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ,ಕುಮಾರಸ್ವಾಮಿಯವರು ಮುಸ್ಲಿಂ ನನಗೆ ಬೇಕಾಗಿಲ್ಲ ಅಂತ ಹೇಳಿದ್ರು. ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದು ಮುಸ್ಲಿಂ ಓಟ್ ಬೇಡ ಅಂತ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ? ಅಲ್ವಾ ಎಷ್ಟು ಸರಿ ಅಂತ ಕೇಳಿದ್ದೆ?ಮುಸ್ಲಿಂ ಪಂಚರ್ ಹಾಕುವವರು, ವೆಲ್ಡಿಂಗ್ ಮಾಡುವವರು ಅಂತಾ ಹೇಳಿದ್ದಾರೆ.ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ
ಯೂ ಟರ್ನ್ ಕುಮಾರಸ್ವಾಮಿ ಅಂತ ಅವರ ಹೆಸರಿದೆ,
ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಅವರು ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಹೇಳಿರುವುದು.

ಒಕ್ಕಲಿಗರ ಬಗ್ಗೆ ನನಗೆ ಗೌರವ ಇದೆಒಕ್ಕಲಿಗರಿಗೆ ಯಾವ ಹೇಳಿಕೆ ನೀಡಿಲ್ಲ,ನಾನು ಜನತಾದಳಕ್ಕೆ ಬರಲು ಕಾರಣ ಆದಿಚುಂಚನಗಿರಿ ಸ್ವಾಮೀಜಿ. ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು ಬೇಕಿದ್ರೆ ಸ್ವಾಮೀಜಿ ಬಳಿ ಕೇಳಲು ಹೇಳಿಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ,
ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವ. ಕುಮಾರಸ್ವಾಮಿ ಅವರಲ್ಲಿ ಕೇಳಿ ಎಂದು ಸಚಿವ ಜಮೀರ್ ಅಹ್ಮದ್ ಅವರು ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು.


Share to all

You May Also Like

More From Author