BJP ಸರ್ಕಾರ ರಚನೆ ಮಾಡಲು ಸಿದ್ದರಾಮಯ್ಯನವರೇ ಕೆಲ ಶಾಸಕರನ್ನು ಕಳುಹಿಸಿದ್ದರು: ಹೊಸ ಬಾಂಬ್‌ ಸಿಡಿಸಿದ ಜೋಶಿ

Share to all

ಹುಬ್ಬಳ್ಳಿ: ಸಿದ್ದರಾಮಯ್ಯ ಹಾಕಿದ ಬಾಂಬ್​ ಸದ್ಯ ರಾಜ್ಯ ರಾಜಕಾರಣದಲ್ಲೇ ಸಂಚಲನ ಸೃಷ್ಟಿಸಿದೆ. 50 ಶಾಸಕರಿಗೆ 50 ಕೋಟಿ ರೂಪಾಯಿ ಅನ್ನೋದು ಪಕ್ಕಕ್ಕಿಟ್ಟು ಸಿಎಂ ಸಿದ್ದರಾಮಯ್ಯ ಆಡಿದ ಮತ್ತೊಂದು ಮಾತು ರಾಜಕೀಯ ಚಾವಡಿ ಚಿಂತನೆಗೆ ಬೀಳಿಸಿದೆ. ಇದರ ಬೆನ್ನಲ್ಲೇ ಕಳೆದ ಬಾರಿ ಬಿಜೆಪಿ ಸರ್ಕಾರ ರಚನೆ ಮಾಡೋವಾಗ ಶಾಸಕರನ್ನು ಕಳುಹಿಸಿದ್ದೆ ಕಾಂಗ್ರೆಸ್ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್‌ ಜೋಶಿ ಸ್ಫೋಟಕ ಬಾಂಬ್‌ ಸಿಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮುಂದುವರೆಯಬಾರದು ಎನ್ನುವ ಕಾರಣಕ್ಕೆ ಸಿದ್ದರಾಮಯ್ಯನವರೇ ಕೆಲ ಶಾಸಕರನ್ನು ಕಳುಹಿಸಿದ್ದರು. ಹೀಗಾಗಿ ನಾವು ಸರ್ಕಾರ ರಚನೆ ಮಾಡಿದ್ದೆವು. ಈ ಬಾರಿ ಅವರಿಗೆ ಬಹುಮತ ಇದೆ. ನಾವು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ 100 ಕೋಟಿ ನೀಡಿದ ಆಫರ್‌ ಬಗ್ಗೆ ದಾಖಲೆ ಇದ್ದರೆ ರವಿ ಗಾಣಿಗ ದಾಖಲೆ ಬಿಡುಗಡೆ ಮಾಡಲಿ. ವಿಷಯನ್ನು ಬೇರೆ ಕಡೆಗೆ ತಿರುಗಿಸಲು ಸುಮ್ಮನೆ ಮಾತನಾಡುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಂಡಿದ್ದಾರೆ. ಹೀಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


Share to all

You May Also Like

More From Author