India vs Australia Test: ಟೀಮ್ ಇಂಡಿಯಾಗೆ ಆಘಾತ, ಮೊದಲ ಟೆಸ್ಟ್ಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ!

Share to all

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಆದರೆ ಈ ಸರಣಿಯ ಮೊದಲ ಟೆಸ್ಟ್ ಗೆ ಇಬ್ಬರು ಆಟಗಾರರು ಅಲಭ್ಯರಿರಲಿದ್ದಾರೆ.

ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ. 2ನೇ ಮಗುವಿನ ತಂದೆಯಾದ ಖುಷಿಯಲ್ಲಿರುವ ಹಿಟ್​ಮ್ಯಾನ್ ದ್ವಿತೀಯ ಪಂದ್ಯದ ವೇಳೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

ಇನ್ನು ಪರ್ತ್​ ಟೆಸ್ಟ್​ಗೆ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ ಕೂಡ ಅಲಭ್ಯರಾಗಿದ್ದಾರೆ. ಫೀಲ್ಡಿಂಗ್ ಅಭ್ಯಾಸದ ವೇಳೆ ಗಿಲ್ ಅವರ ಎಡಗೈ ಹೆಬ್ಬೆರಳು ಮುರಿತಕ್ಕೊಳಗಾಗಿದ್ದು, ವೈದ್ಯಕೀಯ ಪರಿಶೀಲನೆ ಬಳಿಕ ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯದಿಂದ ಗಿಲ್ ಕೂಡ ಹೊರಗುಳಿಯಲಿದ್ದಾರೆ.

ಅತ್ತ ನಾಯಕ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಜಸ್​ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡುತ್ತಿದೆ. ಅಡಿಲೇಡ್​ನಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.


Share to all

You May Also Like

More From Author