ಆಂಧ್ರ:- ತಿಮ್ಮಪ್ಪನ ಭಕ್ತರಿಗೆ ಸಿಕ್ತು ಗುಡ್ ನ್ಯೂಸ್ ಸಿಕ್ಕಿದ್ದು, ತಿರುಮಲಕ್ಕೆ ಹೋಗುವವರು ಮಿಸ್ ಮಾಡ್ದೆ ಈ ಸುದ್ದಿ ನೋಡಿ.ಭಕ್ತರು ಇನ್ನುಮುಂದೆ ದಿನಗಟ್ಟಲೆ ತಿಮ್ಮಪ್ಪನ ದರ್ಶನಕ್ಕಾಗಿ ಕಾದು ನಿಲ್ಲುವ ಸಮಸ್ಯೆಯಿರುವುದಿಲ್ಲ. 3 ಗಂಟೆಗಳನ್ನೇ ದರ್ಶನ ಮಾಡಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ ದೇವಸ್ಥಾನದಲ್ಲಿ ದರ್ಶನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ.
ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿಯು ಕೃತಕ ಬುದ್ಧಿಮತ್ತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಹೊಸ ದರ್ಶನ ವ್ಯವಸ್ಥೆಯನ್ನು ಮಾಡಲು ನಿರ್ಧರಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಹೊಸ ವ್ಯವಸ್ಥೆಯಲ್ಲಿ ಭಕ್ತರಿಗೆ ಕೇವಲ 2 ಗಂಟೆಯಲ್ಲಿ ವೆಂಕಟೇಶ್ವರನ ದರ್ಶನ ನೀಡಲಾಗುವುದು.
ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಲು 20 ರಿಂದ 30 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಏಕೆಂದರೆ ಪ್ರತಿದಿನ 1ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡುತ್ತಾರೆ. ಸೆಪ್ಟೆಂಬರ್ ನಲ್ಲಿ ತಿರುಪತಿಯ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪದ ಪ್ರಕರಣ ಬೆಳಕಿಗೆ ಬಂದಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು
ಇದಾದ ನಂತರ ಟಿಟಿಡಿ ಪ್ರಸಾದದ ವ್ಯವಸ್ಥೆಯನ್ನು ಬದಲಾಯಿಸಿತು. ಅದರ ನಂತರ, ಮಂಡಳಿಯ ಮೊದಲ ಸಭೆ ನಡೆಯಿತು, ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಭಕ್ತಾದಿಗಳಿಗೆ TTD ಗುಡ್ ನ್ಯೂಸ್ ಕೊಟ್ಟಿದೆ.